ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ Z ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ
ಜುಲೈ 2021 ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಥಾವರ್ ಚಂದ್ ಗೆಹ್ಲೋಟ್ಅವರು ಕರ್ನಾಟಕದ 13 ನೇ ರಾಜ್ಯಪಾಲರಾಗಿದ್ದಾರೆ.

ನವದೆಹಲಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಷ್ಟ್ರದಾದ್ಯಂತ ಸುದ್ದಿಯಲ್ಲಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ 'Z' ಕೆಟಗರಿ ಭದ್ರತೆ ಒದಗಿಸಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಸರ್ಕಾರ ಈ ಆದೇಶ ಹೊರಡಿಸಿದ್ದು, ಸಿಆರ್ ಪಿಎಫ್ ಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
CRPF ಸಿಬ್ಬಂದಿ ಭೌತಿಕವಾಗಿ ರಾಜ್ಯಪಾಲರ ಭದ್ರತೆ ವಹಿಸಿಕೊಂಡಿದ್ದು, ಇತರ ಕೆಲವು ಕಾರ್ಯವಿಧಾನಗಳು ಈ ವಾರದೊಳಗೆ ಪೂರ್ಣಗೊಳ್ಳಲಿವೆ. ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳು ಹೇಳಿವೆ.
ಜುಲೈ 2021 ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಥಾವರ್ ಚಂದ್ ಗೆಹ್ಲೋಟ್ಅವರು ಕರ್ನಾಟಕದ 13 ನೇ ರಾಜ್ಯಪಾಲರಾಗಿದ್ದಾರೆ. ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿಯಾಗಿದ್ದಾರೆ.
ಗೆಹ್ಲೋಟ್ ಅವರು 2014 ರಿಂದ 2021 ರವರೆಗೆ ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಸ್ಥಾನವನ್ನು ಹೊಂದಿದ್ದರು. ಅಲ್ಲದೇ ಅವರು, ರಾಜ್ಯಸಭೆಯಲ್ಲಿ ಸಭಾನಾಯಕರಾಗಿಯೂ ಸೇವೆ ಸಲ್ಲಿಸಿದ್ದು, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿದ್ದರು.

ಕೆಐಎಡಿಬಿ ಹಗರಣ: ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


