ದೇಶ

ದೀಪಾವಳಿ: ಪಟಾಕಿ ಮಾರಾಟ, ಬಳಕೆಗೆ ದೆಹಲಿ ಸರ್ಕಾರ ನಿಷೇಧ!

ಇದು ಜನವರಿ 1ರವರೆಗೂ ಜಾರಿಯಲ್ಲಿರುತ್ತದೆ. ಈ ಘೋಷಣೆ ಮಾಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರೈ, ರಾಷ್ಟ್ರ ರಾಜಧಾನಿಯನ್ನು ವಾಯು ಮಾಲಿನ್ಯ ಮುಕ್ತ ನಗರವನ್ನಾಗಿಸಲು ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ದೀಪಾವಳಿ: ಪಟಾಕಿ ಮಾರಾಟ, ಬಳಕೆಗೆ ದೆಹಲಿ ಸರ್ಕಾರ ನಿಷೇಧ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಚಳಿಗಾಲ ಸಮೀಪಿಸುತ್ತಿದ್ದಂತೆ ಮಾಲಿನ್ಯದ ಮಟ್ಟ ಹೆಚ್ಚಾಗುವ ನಿರೀಕ್ಷೆಯಲ್ಲಿ ದೆಹಲಿ ಸರ್ಕಾರ ಸೋಮವಾರ ನಗರದಾದ್ಯಂತ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿದೆ.

ಇದು ಜನವರಿ 1ರವರೆಗೂ ಜಾರಿಯಲ್ಲಿರುತ್ತದೆ. ಈ ಘೋಷಣೆ ಮಾಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರೈ, ರಾಷ್ಟ್ರ ರಾಜಧಾನಿಯನ್ನು ವಾಯು ಮಾಲಿನ್ಯ ಮುಕ್ತ ನಗರವನ್ನಾಗಿಸಲು ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರೈ, ಚಳಿಗಾಲದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 1 ರವರೆಗೆ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರಲಾಗಿದೆ. ಇದರ ಬಗ್ಗೆ ಸರ್ಕಾರ ಸೂಚನೆಗಳನ್ನು ನೀಡಿದೆ. ಎಲ್ಲಾ ದೆಹಲಿ ಜನರಲ್ಲಿ ಸಹಕಾರವನ್ನು ಕೋರುತ್ತೇವೆ. ನಿಷೇಧ ಆದೇಶ ಪರಿಣಾಮಕಾರಿಯಾಗಿ ಅನುಷ್ಠಾನದ ಖಾತ್ರಿಗಾಗಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಸೂಚನೆಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಮಾರಾಟವಾಗುವ ಪಟಾಕಿಗಳು ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಅನ್ವಯಿಸುತ್ತದೆ. ದೆಹಲಿ ಪೋಲೀಸರು ನಿಷೇಧ ಜಾರಿ ಕಾರ್ಯ ನಿರ್ವಹಿಸಲಿದ್ದು, ದೈನಂದಿನ ಕ್ರಿಯೆಯ ವರದಿಗಳನ್ನು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಗೆ ಸಲ್ಲಿಸಬೇಕಾಗುತ್ತದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.