ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ದಿನಾಂಕ ಘೋಷಣೆ; ರಾಜ್ಯದಲ್ಲಿ ನವೆಂಬರ್ 13ರಂದು ಉಪಚುನಾವಣೆ
ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಅ.15 ರಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದರೆ, ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೂರು ಕ್ಷೇತ್ರಗಳ ಉಪಚುನಾವಣೆ: ಕುಟುಂಬದ ಸದಸ್ಯರಿಗೆ ಮಣೆ; ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಲು ಜಮೀರ್ ಗೆ ಹೊಣೆ!
ಇದೇ ವೇಳೆ ಇತ್ತೀಚೆಗೆ ಪೂರ್ಣಗೊಂಡ ಹರ್ಯಾಣದ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ಉಪಚುನಾವಣೆಗಳು ಇಲ್ಲ ಎಂದು ಮುಖ್ಯ ಆಯುಕ್ತರು ಘೋಷಿಸಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶಾಸಕರಿಂದ ತೆರವುಗೊಂಡ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. ನ.13 ರಂದು ಮತದಾನ ನಡೆಯಲಿದೆ
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾಂವಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾವೇರಿಯಿಂದ, ಚನ್ನಪಟ್ಟಣ ಶಾಸಕರಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಪ್ರವೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



