ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.3ರಷ್ಟು ಡಿಎ ಹೆಚ್ಚಳ
ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಸರ್ಕಾರಿ ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಸರ್ಕಾರಿ ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಏರಿಕೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳ ಡಿಎಯನ್ನು ವರ್ಷಕ್ಕೆ ಎರಡು ಬಾರಿ ಪರಿಷ್ಕರಣೆ ಮಾಡುತ್ತದೆ. ಜನವರಿಯಲ್ಲಿ ಹಾಗೂ ಜುಲೈನಿಂದ ಪೂರ್ವಾನ್ವಯವಾಗುವಂತೆ ನಂತರದ ತಿಂಗಳುಗಳಲ್ಲಿ ಡಿಎ ಪರಿಷ್ಕರಣೆ ನಡೆಸುವುದು ರೂಢಿ. ಈ ಮೂಲಕ ಹಾಲಿ ಕೇಂದ್ರ ಸರ್ಕಾರಿ ನೌಕರರು ಡಿಎ ಪಡೆದರೆ ಪಿಂಚಣಿದಾರರು ಡಿಆರ್ (ಡಿಯರ್‌ನೆಸ್ ರಿಲೀಫ್) ಸ್ವೀಕರಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



