ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!
ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಬಿಜೆಪಿಯ ಮಾಜಿ ನಾಯಕ ಸುರೇಂದ್ರ ಚೌಧರಿಗೆ ತಮ್ಮ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಸುರೇಂದ್ರ ಚೌಧರಿ ಜಮ್ಮುವಿನ ನೌಶೇರಾದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
"ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ" ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
"ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ" ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಐವರು ಸಚಿವರಾದ ಸಕೀನಾ ಮಸೂದ್ (ಇಟೂ), ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಕ್ರಮೇಣ ಭರ್ತಿ ಮಾಡಲಾಗುವುದು ಎಂದು ಅಬ್ದುಲ್ಲಾ ಹೇಳಿದರು.
ನೌಶೇರಾದಿಂದ ಬಿಜೆಪಿಯ ಜಮ್ಮು-ಕಾಶ್ಮೀರದ ಅಧ್ಯಕ್ಷ ರವೀಂದರ್ ರೈನಾ ಅವರನ್ನು 7,819 ಮತಗಳಿಂದ ಸೋಲಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ಸದಸ್ಯ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ಆದ್ದರಿಂದ ಜಮ್ಮುವಿನ ಜನರು ಸರ್ಕಾರದಿಂದ ಹೊರಗುಳಿದಿದ್ದಾರೆಂದು ಭಾವಿಸುವುದಿಲ್ಲ ಎಂದು ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



