ಅಸ್ಸಾಂ: ಅಗರ್ತಲಾ-ಎಲ್‌ಟಿಟಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು ಹಳಿತಪ್ಪಿ ಅವಘಡ
ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾದ ಬಗ್ಗೆ ಇನ್ನೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ದಿಬಾಲಾಂಗ್: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಗುರುವಾರ ಮಧ್ಯಾಹ್ನ ಹಳಿತಪ್ಪಿವೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾದ ಬಗ್ಗೆ ಇನ್ನೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಇಂದು ಮಧ್ಯಾಹ್ನ 3.55ಕ್ಕೆ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳಿತಪ್ಪಿದ ಬೋಗಿಗಳಲ್ಲಿ ಪವರ್ ಕಾರ್ ಮತ್ತು ರೈಲಿನ ಎಂಜಿನ್ ಸೇರಿದೆ.
ರಕ್ಷಣಾ ಕಾರ್ಯಾಚರಣೆ ಮತ್ತು ರೈಲು ಸೇವೆ ಮರುಸ್ಥಾಪನೆ ಕಾರ್ಯದ ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳೊಂದಿಗೆ ಅಪಘಾತ ಪರಿಹಾರ ವೈದ್ಯಕೀಯ ರೈಲು ಈಗಾಗಲೇ ಲುಮ್ಡಿಂಗ್‌ನಿಂದ ಸ್ಥಳಕ್ಕೆ ತೆರಳಿದೆ.
ಲುಮ್ಡಿಂಗ್-ಬದರ್‌ಪುರ್ ಸಿಂಗಲ್ ಲೈನ್ ಬೆಟ್ಟದ ವಿಭಾಗದಲ್ಲಿ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



