ಸತತ 2ನೇ ಅವಧಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವ ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಚಂಢೀಗಡ: ಚಂಢೀಗಡ: 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು, ಸತತ ಮೂರನೇ ಅವಧಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧಿಕಾರಕ್ಕೆ ಬಂದಿದ್ದು, ಎರಡನೇ ಅವಧಿಗೆ ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸೈನಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸೈನಿ ಅವರೊಂದಿಗೆ ಅಂಬಾಲಾ ಕ್ಯಾಂಟ್ ಶಾಸಕ ಅನಿಲ್ ವಿಜ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಾದಶಹಪುರ ಶಾಸಕ ರಾವ್ ನರಬೀರ್ ಸಿಂಗ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸೈನಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದರು ಮತ್ತು ಪಂಚಕುಲದ ಗುರುದ್ವಾರ ಹಾಗೂ ಮಾನಸಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಹದಿಮೂರು ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


