ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದಾಳಿ, 10 ಮಂದಿಗೆ ಗಾಯ
ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಜೈಪುರ: ಜೈಪುರದ ದೇವಸ್ಥಾನವೊಂದರ ಧಾರ್ಮಿಕ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.
ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಕೆಲವರು ತಡರಾತ್ರಿ ದೆಹಲಿ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



