ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಧ್ಯಪ್ರದೇಶ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು
ವಕೀಲರಾದ ಅನಿಲ್ ನಾಯ್ಡು ಅವರು ನೀಡಿದ ದೂರಿನ ಆಧಾರದ ಮೇಲೆ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ.

ಇಂದೋರ್: ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶ ಶಿಯೋಪುರದ ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್‌ನ ಕಾನೂನು ಕೋಶದ ಮಾಳವ ಪ್ರಾಂತ್(ಇಂದೋರ್-ಉಜ್ಜಯಿನಿ ವಿಭಾಗ) ಸಂಚಾಲಕ ಮತ್ತು ವಕೀಲ ಅನಿಲ್ ನಾಯ್ಡು ಅವರು ನೀಡಿದ ದೂರಿನ ಆಧಾರದ ಮೇಲೆ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 299(ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಮತ್ತು 302(ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಿಟಿಐ ಜೊತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಹಂಸರಾಜ್ ಸಿಂಗ್, ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶಿಯೋಪುರದಲ್ಲಿ ಜಂಡೆಲ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇಂದೋರ್‌ನಲ್ಲಿ ದಾಖಲಾಗಿರುವ ಪ್ರಕರಣವನ್ನು ಮೂಲ ಎಫ್‌ಐಆರ್‌ನೊಂದಿಗೆ ಲಗತ್ತಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮ ವರದಿಗಳಲ್ಲಿ ಕಾಣಿಸಿಕೊಂಡಿರುವ ವಿಡಿಯೋವನ್ನು ಉಲ್ಲೇಖಿಸಿ, ನಾಯ್ಡು ಅವರು ತಮ್ಮ ದೂರಿನಲ್ಲಿ ಶಿವನನ್ನು ನಿಂದಿಸಲಾಗಿದೆ. ಇದರಿಂದ ತಮ್ಮಂತಹ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



