ಇದೀಗ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಜೈಪುರದಲ್ಲಿ ತುರ್ತು ಭೂಸ್ಪರ್ಶ
ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ಜೈಪುರ: ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಶನಿವಾರ ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. 189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳು ಸರಣಿ ಬಾಂಬ್ ಬೆದರಿಕೆ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಪ್ರಯಾಣಿಕರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಬೆದರಿಕೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವೆಲ್ಲವೂ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಈ ವಾರ 20 ಕ್ಕೂ ಹೆಚ್ಚು ವಿಮಾನಗಳು ಬಾಂಬ್ ಬೆದರಿಕೆ ಸಂದೇಶಗಳನ್ನು ಸ್ವೀಕರಿಸಿವೆ. ಇದು ಮಾರ್ಗ ಬದಲಾವಣೆಗಳಿಗೆ ಮತ್ತು ವಿಮಾನಗಳ ವಿಳಂಬಕ್ಕೆ ಕಾರಣವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



