ದೇಶ

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!
ಉತ್ತರ ಪ್ರದೇಶ ಪೊಲೀಸರ ಸಾಂದರ್ಭಿಕ ಚಿತ್ರ
Published On :

ಕಾನ್ಪುರ: 'ಜೈ ಶ್ರೀ ರಾಮ್' ಎಂದು ಕೂಗುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಯುವಕನ ಇನ್ಸ್ಟಾಗ್ರಾಮ್ ಸ್ಟೇಟಸ್ ನಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಂಚಿಕೊಂಡಿದ್ದನ್ನು ನೋಡಿದ ನಂತರ ವಿದ್ಯಾರ್ಥಿಗಳ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಹೇಳಿದ್ದಾರೆ.

ಬಳಿಕ ಯುವಕನಿಗೆ 'ಜೈ ಶ್ರೀ ರಾಮ್' ಎಂದು ಕೂಗುವಂತೆ ಒತ್ತಾಯಿಸಲಾಗಿದೆ. ಇದನ್ನು ಪುಂಡರ ಗುಂಪು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಇದುವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಎಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.