ಡಿಸೆಂಬರ್‌ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!
ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ನವದೆಹಲಿ: ಲಡಾಖ್‌ನ ಬೇಡಿಕೆಗಳ ಕುರಿತು ಡಿಸೆಂಬರ್‌ನಲ್ಲಿ ಮಾತುಕತೆ ಪುನರಾರಂಭಿಸಲಾಗುವುದು ಎಂದು ಗೃಹ ಸಚಿವಾಲಯ ಭರವಸೆ ನೀಡಿದ ನಂತರ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತಿತರರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಳಿಸಿದರು.
ಜಮ್ಮು- ಕಾಶ್ಮೀರ ಮತ್ತು ಲಡಾಖ್‌ನ ಜಂಟಿ ಕಾರ್ಯದರ್ಶಿ ಪ್ರಶಾಂತ್ ಲೋಖಂಡೆ ಅವರು ಅಕ್ಟೋಬರ್ 6 ರಿಂದ ದೆಹಲಿಯ ಲಡಾಖ್ ಭವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಕುಳಿತಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಗೃಹ ಸಚಿವಾಲಯದ ಪತ್ರವನ್ನು ನೀಡಿದರು.
ಲಡಾಖ್‌ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಸಚಿವಾಲಯದ ಉನ್ನತಾಧಿಕಾರ ಸಮಿತಿಯು ಮುಂದಿನ ಸಭೆಯನ್ನು ಡಿಸೆಂಬರ್ 3 ರಂದು ನಡೆಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹೀಗಾಗಿ ವಾಂಗ್ಚುಕ್ ಮತ್ತು ಅವರ ಬೆಂಬಲಿಗರು ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ನಿರ್ಧರಿಸಿದರು.
ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಲಡಾಖ್ ಭವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



