ಕಾಶ್ಮೀರ ಎಂದಿಗೂ ಪಾಕಿಸ್ತಾನ ಆಗಲ್ಲ: ಉಗ್ರ ದಾಳಿಗಳನ್ನು ನಿಲ್ಲಿಸಿ, ಪಾಕ್‌ಗೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ!
ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀನಗರ: 7 ದಶಕಗಳಿಂದ ಆಗದ್ದೂ ಈಗ ಆಗುತ್ತಾ... ಕಾಶ್ಮೀರ ಎಂದಿಗೂ ಪಾಕಿಸ್ತಾನ ಆಗಲ್ಲ. ಉಗ್ರ ದಾಳಿಗಳನ್ನು ನಿಲ್ಲಿಸಿ, ನಮ್ಮನ್ನು ನೆಮ್ಮದಿಯಿಂದ ಜೀವನ ನಡೆಸಲು ಬಿಡಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ. ಕಾಶ್ಮೀರ ಪಾಕಿಸ್ತಾನವಾಗುವುದಿಲ್ಲ. ಹೊರಗಿನ ಕಾರ್ಮಿಕರನ್ನು ಉಲ್ಲೇಖಿಸಿದ ಅವರು, ಕಾಶ್ಮೀರದಲ್ಲಿ ಹಣ ಸಂಪಾದಿಸಲು ಮತ್ತು ಕುಟುಂಬಕ್ಕೆ ಕಳುಹಿಸಲು ಬರುವ ಹೊರಗಿನ ಕಾರ್ಮಿಕರು ನಿನ್ನೆ ಈ ಕ್ರೂರರಿಂದ ಹುತಾತ್ಮರಾಗಿದ್ದಾರೆ ಎಂದು ಹೇಳಿದ್ದು ಇದರಲ್ಲಿ ಜನರ ಸೇವೆ ಮಾಡುವ ನಮ್ಮ ವೈದ್ಯರೂ ಸೇರಿದ್ದಾರೆ.
ಇದನ್ನು ನಾವು ಹಲವು ವರ್ಷಗಳಿಂದ ನೋಡುತ್ತಿದ್ದೇವೆ ಮತ್ತು ಭಾರತದೊಂದಿಗಿನ ಸಂಬಂಧ ಸುಧಾರಿಸಬೇಕಾದರೆ ಇದೆಲ್ಲವೂ ನಿಲ್ಲಬೇಕು ಎಂದು ಪಾಕಿಸ್ತಾನದ ಆಡಳಿತಗಾರರಿಗೆ ಹೇಳಲು ಬಯಸುತ್ತೇವೆ ಎಂದು ಡಾ.ಅಬ್ದುಲ್ಲಾ ಹೇಳಿದರು. ಶಾಂತಿ ಮತ್ತು ಘನತೆಯಿಂದ ಬದುಕಲು ಮನವಿ ಮಾಡಿದ ಅವರು ಭಯೋತ್ಪಾದನೆ ವಿರುದ್ಧ ಏಕತೆಯ ಅಗತ್ಯವನ್ನು ಒತ್ತಿ ಹೇಳಿದರು. ಈ ಭಯೋತ್ಪಾದಕ ದಾಳಿಯೂ ಕಾಶ್ಮೀರದಲ್ಲಿ ದುಃಖ ಮತ್ತು ಕಳವಳದ ಅಲೆಯನ್ನು ಎಬ್ಬಿಸಿದೆ. ಅಲ್ಲದೆ ಸ್ಥಳೀಯ ನಾಯಕರು ಭಯೋತ್ಪಾದನೆಯ ವಿರುದ್ಧ ಮಾತನಾಡುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


