ದೇಶ

ಪೂರ್ವ ಲಡಾಖ್‌ನ LAC ಉದ್ದಕ್ಕೂ ಗಸ್ತು ಕುರಿತು ಭಾರತ-ಚೀನಾ ಒಪ್ಪಂದ

ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಪೂರ್ವ ಲಡಾಖ್‌ನ LAC ಉದ್ದಕ್ಕೂ ಗಸ್ತು ಕುರಿತು ಭಾರತ-ಚೀನಾ ಒಪ್ಪಂದ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯಲ್ಲಿ (LAC) ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾದ ಸಂಧಾನಕಾರರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ಹೇಳಿದ್ದಾರೆ.

ಇತರ ಸಮಸ್ಯೆಗಳನ್ನು ಪರಿಹರಿಸಲು ಕಳೆದ ಕೆಲವು ವಾರಗಳಿಂದ ಭಾರತ ಮತ್ತು ಚೀನಾದ ಸಂಧಾನಕಾರರು ಸಂಪರ್ಕದಲ್ಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹೇಳಿದರು. ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ಪ್ರಯಾಣಿಸುವ ಒಂದು ದಿನ ಮೊದಲು ಈ ಬೆಳವಣಿಗೆ ಕುರಿತು ಘೋಷಣೆ ಬಂದಿದೆ. ಅಧಿಕೃತ ಘೋಷಣೆಯಾಗದಿದ್ದರೂ, ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.