ದೇಶ

ಕಾಶ್ಮೀರ: ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಸೈನಿಕರು, ಇಬ್ಬರು ಪೋರ್ಟರ್‌ಗಳು ಹುತಾತ್ಮ

ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಕಾಶ್ಮೀರ: ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಸೈನಿಕರು, ಇಬ್ಬರು ಪೋರ್ಟರ್‌ಗಳು ಹುತಾತ್ಮ
ಗುಲ್ಮಾರ್ಗ್‌ನಲ್ಲಿ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದ ದೃಶ್ಯ. — Photo | PTI
Published On :

ಶ್ರೀನಗರ: ಕಾಶ್ಮೀರದ ಬೋಟಾ ಪತ್ರಿ ಗ್ರಾಮದಲ್ಲಿ ಗುಲ್ಮಾರ್ಗ್‌ನ ಪ್ರವಾಸಿ ರೆಸಾರ್ಟ್ ಬಳಿ ಭಯೋತ್ಪಾದಕರು ಸೇನಾ ವಾಹನದ ಮೇಲೆ ದಾಳಿ ನಡೆಸಿದಾಗ ಇಬ್ಬರು ಸೈನಿಕರು ಮತ್ತು ಇಬ್ಬರು ಸೇನಾ ಪೋರ್ಟರ್‌ಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ದಾಳಿಗೆ ಒಳಗಾದಾಗ ವಾಹನದಲ್ಲಿದ್ದ ಯೋಧರು ಪ್ರತೀಕಾರದ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ X ಪೋಸ್ಟ್‌ನಲ್ಲಿ, "ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಬಾರಾಮುಲ್ಲಾದಲ್ಲಿ ಪ್ರದೇಶವಾದ ಬೋಟಾ ಪತ್ರಿ ಬಳಿ, ಸಣ್ಣ ಗುಂಡಿನ ಚಕಮಕಿ ನಡೆದಿದೆ" ಎಂದು ಹೇಳಿದೆ.

"ವಿವರಗಳನ್ನು ಪರಿಶೀಲಿಸಲಾಗುತ್ತಿದೆ" ಎಂದು ಅದು ಹೇಳಿದೆ.

ಈ ಪ್ರದೇಶವು ಸಂಪೂರ್ಣವಾಗಿ ಸೇನೆಯ ಪ್ರಾಬಲ್ಯದಲ್ಲಿದೆ ಮತ್ತು ಈ ವರ್ಷದ ಬೇಸಿಗೆಯ ಆರಂಭದಲ್ಲಿ ಭಯೋತ್ಪಾದಕರ ಗುಂಪೊಂದು ನುಸುಳಿರುವುದಾಗಿ ಮತ್ತು ಅಫ್ರಾವತ್ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದಿದೆ ಎಂದು ಈ ಹಿಂದೆ ವರದಿಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೋಟಾ ಪತ್ರಿ ಪ್ರದೇಶವನ್ನು ಇತ್ತೀಚೆಗೆ ಪ್ರವಾಸಿಗರಿಗೆ ತೆರೆಯಲಾಗಿದೆ.

ಅಕ್ಟೋಬರ್ 20 ರಂದು, ಗಂದೇರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ವೈದ್ಯರು ಮತ್ತು ಆರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.