ದೇಶ

ಶುಕ್ರವಾರವೂ 25ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ

ಕೋಝಿಕ್ಕೋಡ್‌ - ದಮಾಮ್‌ 6E 87 ವಿಮಾನ ಸೇರಿದಂತೆ ಏಳು ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಶುಕ್ರವಾರ ಇಂಡಿಗೋ ವಕ್ತಾರರು ತಿಳಿಸಿದ್ದಾರೆ.

ಶುಕ್ರವಾರವೂ 25ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಶುಕ್ರವಾರವೂ ಬರೋಬ್ಬರಿ 25ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಕೋಝಿಕ್ಕೋಡ್‌ - ದಮಾಮ್‌ 6E 87 ವಿಮಾನ ಸೇರಿದಂತೆ ಏಳು ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಶುಕ್ರವಾರ ಇಂಡಿಗೋ ವಕ್ತಾರರು ತಿಳಿಸಿದ್ದಾರೆ.

ಇಂಡಿಗೋ, ವಿಸ್ತಾರಾ ಮತ್ತು ಸ್ಪೈಸ್‌ಜೆಟ್‌ನ ತಲಾ ಏಳು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದರೆ, ಏರ್ ಇಂಡಿಯಾದ ಆರು ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಇಂಡಿಗೋದ ಇತರ ಆರು ವಿಮಾನಗಳು - 6E 2099(ಉದಯಪುರದಿಂದ ದೆಹಲಿ), 6E 11 (ದೆಹಲಿಯಿಂದ ಇಸ್ತಾಂಬುಲ್), 6E 58 (ಜೆಡ್ಡಾದಿಂದ ಮುಂಬೈ), 6E 17 (ಮುಂಬೈನಿಂದ ಇಸ್ತಾಂಬುಲ್), 6E 108 (ಹೈದರಾಬಾದ್‌ನಿಂದ ಚಂಡೀಗಢ) ಮತ್ತು 6E 133(ಪುಣೆಯಿಂದ ಜೋಧಪುರ) ವಿಮಾನಗಳಿಗೆ ಬೆದರಿಕೆ ಸಂದೇಶಗಳು ಬಂದಿವೆ.

"ಉದಯಪುರದಿಂದ ದೆಹಲಿಗೆ ಕಾರ್ಯಾಚರಣೆ ನಡೆಸುತ್ತಿರುವ ಫ್ಲೈಟ್ 6E 2099 ಬಾಂಬ್ ಬೆದರಿಕೆಯನ್ನು ಸ್ವೀಕರಿಸಿದೆ. ಭದ್ರತಾ ಪಡೆಯ ಮಾರ್ಗಸೂಚಿಗಳನ್ನು ಅನುಸರಿಸಿ, ವಿಮಾನವನ್ನು ಟೇಕ್-ಆಫ್ ಮಾಡುವ ಮೊದಲು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು ಮತ್ತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ" ಎಂದು ಏರ್‌ಲೈನ್ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 12 ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 275 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.