ನಟಿ ರಿಯಾ ಚಕ್ರವರ್ತಿ ವಿರುದ್ಧದ ಲುಕ್‌ಔಟ್ ನೋಟಿಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಿಯಾ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಆಕೆಯ ತಂದೆ ಲೆಫ್ಟಿನೆಂಟ್ ಕರ್ನಲ್ ಇಂದ್ರಜಿತ್ ಚಕ್ರವರ್ತಿ(ಸೇನಾ ಯೋಧ) ವಿರುದ್ಧ ಸಿಬಿಐ ಲುಕ್-ಔಟ್ ನೋಟಿಸ್ ಹೊರಡಿಸಿತ್ತು.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಮತ್ತು ಅವರ ತಂದೆ ಹಾಗೂ ಸಹೋದರನ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್‌ಔಟ್ ನೋಟಿಸ್(ಎಲ್‌ಒಸಿ)ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿ ಹಿಡಿದಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಿಯಾ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಆಕೆಯ ತಂದೆ ಲೆಫ್ಟಿನೆಂಟ್ ಕರ್ನಲ್ ಇಂದ್ರಜಿತ್ ಚಕ್ರವರ್ತಿ(ಸೇನಾ ಯೋಧ) ವಿರುದ್ಧ ಸಿಬಿಐ ಲುಕ್-ಔಟ್ ನೋಟಿಸ್ ಹೊರಡಿಸಿತ್ತು. ಇದನ್ನು ಬಾಂಬ್ ಹೈಕೋರ್ಟ್ ರದ್ದುಗೊಳಿಸಿತ್ತು.
ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠ, ಸಿಬಿಐನ ಅರ್ಜಿ ಅತ್ಯಂತ "ಕ್ಷುಲ್ಲಕ" ಎಂದು ಕರೆದಿದೆ. ಆರೋಪಿಗಳಲ್ಲಿ ಒಬ್ಬರು ಉನ್ನತ ವ್ಯಕ್ತಿಗಳಾಗಿರುವುದರಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ಟೀಕಿಸಿದೆ.
ಜೂನ್ 12, 2020ರಂದು ನಟ ಸುಶಾಂತ್ ಸಿಂಗ್ ಅವರ ಮೃತದೇಹ ಬಾಂದ್ರಾದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ನಟನ ಕುಟುಂಬಸ್ಥರು ನಟಿ ರಿಯಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



