ದೇಶ

Jammu and Kashmir: ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ; ಶೋಧ ಕಾರ್ಯಾಚರಣೆ ಆರಂಭ!

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Jammu and Kashmir: ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ; ಶೋಧ ಕಾರ್ಯಾಚರಣೆ ಆರಂಭ!
ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಕುಕೃತ್ಯ ಮುಂದುವರೆಸಿದ್ದು, ಸೇನಾವಾಹನದ ಮೇಲೆ ದಾಳಿ ಮಾಡಿದ್ದಾರೆ.

ಹೌದು.. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಆದರೆ ಕೂಡಲೇ ಸೈನಿಕರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಸೇನಾ ಮೂಲಗಳ ಪ್ರಕಾರ ಘಟನಾ ಪ್ರದೇಶದಲ್ಲಿ ಮೂವರು ಉಗ್ರರು ಅವಿತಿರುವ ಶಂಕೆ ಇದ್ದು ಸೇನೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ.

ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಉಪಸ್ಥಿತಿಯನ್ನು ಖೌರ್‌ನ ಭಟ್ಟಾಲ್ ಪ್ರದೇಶದ ಅಸ್ಸಾನ್ ದೇವಾಲಯದ ಬಳಿ ಗ್ರಾಮಸ್ಥರು ವರದಿ ಮಾಡಿದ್ದಾರೆ ಎನ್ನಲಾಗಿದೆ. ಸೇನೆಯ ಆಂಬ್ಯುಲೆನ್ಸ್ ಹಾದು ಹೋಗುತ್ತಿದ್ದಾಗ ಗ್ರಾಮದಲ್ಲಿ ಕೆಲವು ಗುಂಡಿನ ಶಬ್ದಗಳು ಕೇಳಿಬಂದವು.

ಕೂಡಲೇ ಪೊಲೀಸ್ ಜೊತೆಗೆ ಸೇನಾ ಪಡೆಗಳು ಗ್ರಾಮದ ಅಕ್ಕಪಕ್ಕದ ಪ್ರದೇಶಗಳನ್ನು ಸುತ್ತುವರೆದಿವೆ. ಉಗ್ರರು ಗಡಿಯಾಚೆಯಿಂದ ಒಳ ನುಸುಳಿದ್ದಾರೆ ಎಂದು ಹೇಳಲಾಗಿದ್ದು, ಇದೀಗ ಉಗ್ರರ ತಟಸ್ಥಗೊಳಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.