ಹೈದ್ರಾಬಾದ್ ಪಟಾಕಿ ಅಂಗಡಿಯಲ್ಲಿ ಬೆಂಕಿ ದುರಂತ; ಭೀಕರ Video ವೈರಲ್; ಮಾಲೀಕನಿಗೆ ಶಾಕ್!
ದೀಪಾವಳಿಗೆ ಮುನ್ನ ಮಾರಾಟಕ್ಕಾಗಿ ಅಂಗಡಿಯಲ್ಲಿ ಶೇಖರಿಸಿಡಲಾಗಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಇಡೀ ಅಂಗಡಿ ಭಸ್ಮವಾಗಿದೆ.

ಹೈದರಾಬಾದ್: ತೆಲಂಗಾಣ ರಾಜದಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಅಂಗಡಿ ಬೆಂಕಿಗಾಹುತಿಯಾದ ಭೀಕರ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ದೀಪಾವಳಿಗೆ ಮುನ್ನ ಮಾರಾಟಕ್ಕಾಗಿ ಅಂಗಡಿಯಲ್ಲಿ ಶೇಖರಿಸಿಡಲಾಗಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಇಡೀ ಅಂಗಡಿ ಭಸ್ಮವಾಗಿದೆ.
ಭಾನುವಾರ ರಾತ್ರಿ ಹೈದರಾಬಾದ್ನ ರಾಮ್ಕೋಟೆಯಲ್ಲಿರುವ ಪಟಾಕಿ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಪ್ರದೇಶದ ಹಲವಾರು ವ್ಯಾಪಾರಿಗಳಲ್ಲಿ ಭೀತಿಯನ್ನು ಉಂಟುಮಾಡಿತ್ತು. ಪರಾಸ್ ಪಟಾಕಿಯ ಸಗಟು ಪಟಾಕಿ ಅಂಗಡಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಅಂಗಡಿಯೊಳಗೆ ಪಟಾಕಿಗಳು ಬೆಂಕಿ ತಗುಲಿ ಸಿಡಿದಿದ್ದು, ಭಯಭೀತರಾದ ಗ್ರಾಹಕರು ಗಾಬರಿಯಿಂದ ಹೊರಗೆ ಓಡಿಹೋಗಿದ್ದಾರೆ. ಸ್ಫೋಟ ಪ್ರಾರಂಭವಾಗುತ್ತಿದ್ದಂತೆ, ಅನೇಕರು ಅಂಗಡಿಯಿಂದ ಹೊರಗೆ ಓಡಿಬಂದಿದ್ದು, ಆದರೆ ಕೆಲವರು ಬೆಂಕಿ ಜ್ವಾಲೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ವೀಡಿಯೊದ ಕೊನೆಯಲ್ಲಿ, ಅಂಗಡಿಯಿಂದ ದಟ್ಟವಾದ ಹೊಗೆ ಬರುತ್ತಿರುವ ಆತಂಕಕಾರಿ ದೃಶ್ಯ ಕಾಣುತ್ತದೆ.
ಇನ್ನು ವಿಚಾರ ತಿಳಿದ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಪಟಾಕಿಗಳು ಸಿಡಿಯುತ್ತಲೇ ಇದ್ದುದರಿಂದ ಪರಿಸ್ಥಿತಿ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿಗೂ ಸವಾಲಾಗಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಂತೆಯೇ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೆಲವರಿಗೆ ಸುಟ್ಟಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಲೀಕನಿಗೆ ಶಾಕ್
ಇನ್ನು ಈ ಅಂಗಡಿಯಲ್ಲಿ ಪಟಾಕಿ ಮಾರಾಟಕ್ಕೆ ಯಾವುದೇ ರೀತಿಯ ಪರವಾನಗಿ ಇರಲಿಲ್ಲ ಎಂದು ಹೇಳಲಾಗಿದೆ. ಪರವಾನಗಿ ಇಲ್ಲದೆ ಅಕ್ರಮವಾಗಿ ಅಂಗಡಿ ನಡೆಸಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಲ್ತಾನ್ ಬಜಾರ್ನ ಸಹಾಯಕ ಪೊಲೀಸ್ ಆಯುಕ್ತ ಕೆ ಶಂಕರ್, '“ಅಂಗಡಿಗೆ ಯಾವುದೇ ಪ್ರಮಾಣಪತ್ರವಿಲ್ಲ. ಅದೊಂದು ಅಕ್ರಮ ಅಂಗಡಿಯಾಗಿತ್ತು. ನಾವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



