ಮಾಹಿಮ್ ಕ್ಷೇತ್ರದಲ್ಲಿ ರಾಜ್ ಠಾಕ್ರೆ ಪುತ್ರನಿಗೆ ಬಿಜೆಪಿ ಬೆಂಬಲ ದೃಢವಾಗಿದೆ: ಫಡ್ನವಿಸ್
ನವೆಂಬರ್ 20 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಸ್ಥಾನಗಳಲ್ಲಿ ಸೌಹಾರ್ದ ಹೋರಾಟ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹೇಳಿದರು.

ಮುಂಬೈ: ಆಡಳಿತಾರೂಢ ಶಿವಸೇನೆ ಕೂಡ ಸ್ಪರ್ಧಿಸುತ್ತಿರುವ ಮಾಹಿಮ್ ವಿಧಾನಸಭಾ ಕ್ಷೇತ್ರದಲ್ಲಿ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆ ಬಿಜೆಪಿ ಬೆಂಬಲ ಈಗಲೂ ದೃಢವಾಗಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬುಧವಾರ ಹೇಳಿದ್ದಾರೆ.
ಬಂಡಾಯ ಅಭ್ಯರ್ಥಿಗಳ ಬಗ್ಗೆ ಪ್ರತಿಕ್ರಿಯಿಸಿದ ಮಹಾ ಡಿಸಿಎಂ, ಇದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ತಮ್ಮ ಪಕ್ಷವು ಬಂಡಾಯ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸುತ್ತದೆ. ಆದರೆ ನವೆಂಬರ್ 20 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಸ್ಥಾನಗಳಲ್ಲಿ ಸೌಹಾರ್ದ ಹೋರಾಟ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹೇಳಿದರು.
ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಮಹಿಮ್‌ನಿಂದ ಹಾಲಿ ಶಾಸಕ ಸದಾ ಸರ್ವಾಂಕರ್ ಅವರನ್ನು ಕಣಕ್ಕಿಳಿಸಿದೆ. ಅಲ್ಲದೆ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ)ಯಿಂದ ಮಹೇಶ್ ಸಾವಂತ್ ಸ್ಪರ್ಧಿಸುತ್ತಿದ್ದಾರೆ.
ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಬಿಜೆಪಿ, ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ಒಳಗೊಂಡ ಮಹಾಯುತಿಯ ಭಾಗವಲ್ಲ. ಆದರೆ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟವನ್ನು ಬೆಂಬಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



