ದೇಶ

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ; ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ

ಸುಲಿಗೆ ಸಂಬಂಧ ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ ದೂರು ಸಲ್ಲಿಕೆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ;  ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ
ಛೋಟಾ ರಾಜನ್ ಸಾಂದರ್ಭಿಕ ಚಿತ್ರ
Published On :

ಮುಂಬೈ: ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ 10 ಕೋಟಿ ರೂ. ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮುಂಬೈನ ಬಾಂದ್ರಾದಲ್ಲಿ ಛೋಟಾ ರಾಜನ್ ಗ್ಯಾಂಗ್‌ನ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಸುಲಿಗೆ ಸಂಬಂಧ ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ ದೂರು ಸಲ್ಲಿಕೆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ. 10 ಕೋಟಿ ರೂ.ಗೆ ಆರೋಪಿಗಳು ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.

ಡೆವಲಪರ್ ಮತ್ತು ಅವರ ಪಾಲುದಾರರು 55 ಲಕ್ಷ ರೂ.ಗಳನ್ನು ರಕ್ಷಣೆ ಹಣವಾಗಿ ಪಾವತಿಸಿದ್ದಾರೆ ಆದರೆ ಹೆಚ್ಚಿನ ಹಣಕ್ಕಾಗಿ ಬೆದರಿಕೆ ಕರೆ ಮುಂದುವರೆದಿತ್ತು ಎನ್ನಲಾಗಿದೆ. ಮಂಗಳವಾರ ಚೋಟಾ ರಾಜನ್ ಗ್ಯಾಂಗ್ ಸದಸ್ಯರು ರೂ. 5 ಲಕ್ಷ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಬಾಂದ್ರಾ ವೆಸ್ಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರ ಬಳಿ ಬಲೆ ಬೀಸಿದ ಪೊಲೀಸರು, ಹಣ ಸಂಗ್ರಹಿಸಲು ಅಲ್ಲಿಗೆ ಬಂದ ದರೋಡೆಕೋರರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.