ದೇಶ

ಅಸ್ಸಾಂ: 10 ಕೋಟಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆ ಜಪ್ತಿ, ಇಬ್ಬರ ಬಂಧನ

"ನಮ್ಮ ತಂಡವು ವಾಹನವನ್ನು ತೀವ್ರ ತಾಪಸಣೆ ನಡೆಸಿದೆ. ಈ ವೇಳೆ ಹಿಡನ್ ಚೇಂಬರ್ ನಲ್ಲಿ ಇರಿಸಲಾಗಿದ್ದ 25 ಬಂಡಲ್ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಅಸ್ಸಾಂ: 10 ಕೋಟಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆ ಜಪ್ತಿ, ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :

ಕರ್ಬಿ ಅಂಗ್ಲಾಂಗ್: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ 10 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಮಣಿಪುರದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಸಂಜೆ ದಿಲ್ಲೈ ಟಿನಿಯಾಲಿ ಪ್ರದೇಶದಲ್ಲಿ ವಾಡಿಕೆಯ ತಪಾಸಣೆ ಸಂದರ್ಭದಲ್ಲಿ ನಿಷೇಧಿತ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ನಮ್ಮ ತಂಡವು ವಾಹನವನ್ನು ತೀವ್ರ ತಾಪಸಣೆ ನಡೆಸಿದೆ. ಈ ವೇಳೆ ಹಿಡನ್ ಚೇಂಬರ್ ನಲ್ಲಿ ಇರಿಸಲಾಗಿದ್ದ 25 ಬಂಡಲ್ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಬಂಡಲ್‌ಗಳು 50,000 ಮಾತ್ರೆಗಳನ್ನು ಒಳಗೊಂಡಿದ್ದು, ಇವುಗಳ ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ಅವರು ಹೇಳಿದ್ದಾರೆ.

ವಾಹನದಲ್ಲಿದ್ದ ಮಣಿಪುರದ ದಂಪತಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.