ರಾಜಸ್ತಾನದಲ್ಲಿ MiG-29 ಯುದ್ದ ವಿಮಾನ ಪತನ, ಪೈಲಟ್ ಅಪಾಯದಿಂದ ಪಾರು!
ರಾಜಸ್ತಾನದ ಬಾರ್ಮರ್ ನ ಕವಾಸ್‌ನಲ್ಲಿ ಈ ಯುದ್ಧ ವಿಮಾನ ಪತನಗೊಂಡಿದ್ದು, ವಿಮಾನವು ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಗಂಭೀರ ತಾಂತ್ರಿಕ ದೋಷ ಸಂಭವಿಸಿ ವಿಮಾನ ಪತನವಾಗಿದೆ.

ಬಾರ್ಮರ್: ಭಾರತೀಯ ವಾಯುಪಡೆಗೆ ಸೇರಿದ MiG-29 ಯುದ್ದ ವಿಮಾನ ರಾಜಸ್ತಾನದ ಬಾರ್ಮರ್ ನಲ್ಲಿ ಪತನವಾಗಿದ್ದು, ವಿಮಾನದಲ್ಲಿದ್ದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜಸ್ತಾನದ ಬಾರ್ಮರ್ ನ ಕವಾಸ್‌ನಲ್ಲಿ ಈ ಯುದ್ಧ ವಿಮಾನ ಪತನಗೊಂಡಿದ್ದು, ವಿಮಾನವು ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಗಂಭೀರ ತಾಂತ್ರಿಕ ದೋಷ ಸಂಭವಿಸಿ ವಿಮಾನ ಪತನವಾಗಿದೆ ಎಂದು ವಾಯುಪಡೆಯ ಮೂಲಗಳು ತಿಳಿಸಿವೆ.
ಇನ್ನು ವಿಮಾನದಲ್ಲಿದ್ದ ಪೈಲಟ್ ಎಮರ್ಜೆನ್ಸಿ ಇಜೆಕ್ಷನ್ ಮೂಲಕ ವಿಮಾನದಿಂದ ಹೊರಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ಮಾಹಿತಿ ಇಲ್ಲ. ಪ್ರಕರಣದ ಕುರಿತು ವಾಯುಪಡೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಮುಂದುವರೆದ ರಕ್ಷಣಾ ಕಾರ್ಯಾಚರಣೆ
ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪೈಲಟ್ ಸುರಕ್ಷಿತವಾಗಿದ್ದು, ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ 400 ಮೀಟರ್ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ.
ಗ್ರಾಮಸ್ಥರು ಮಾಹಿತಿ ನೀಡಿದ ನಂತರ ತಂಡವು ಇಲ್ಲಿಗೆ ತಲುಪಿತು. ಯಾವುದೇ ಗ್ರಾಮಸ್ಥರಿಗೆ ಹಾನಿಯಾಗಿಲ್ಲ. ಇದೀಗ ರಾತ್ರಿಯಿಡೀ ರಕ್ಷಣಾ ಕಾರ್ಯ ನಡೆಯಲಿದೆ ಎಂದು ಪೊಲೀಸ್ ಅಧಿಕಾರಿ ಪುಲಿನ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



