ಮಲಯಾಳಂ ಸಿನಿಮಾ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಆರು ಆರೋಪಿಗಳಿದ್ದಾರೆ. ಮೊದಲ ಆರೋಪಿ ಮಹಿಳೆಯಾಗಿದ್ದು, ಪಾಲಿ ಆರನೇ ಆರೋಪಿಯಾಗಿದ್ದಾರೆ.

ತಿರುವನಂತಪುರಂ: ಒಂದು ವರ್ಷದ ಹಿಂದೆ ದುಬೈನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಮಲಯಾಳಂ ಸಿನಿಮಾ ನಟ ನಿವಿನ್ ಪೌಲಿ ವಿರುದ್ಧ ಮಂಗಳವಾರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಆರು ಆರೋಪಿಗಳಿದ್ದಾರೆ. ಮೊದಲ ಆರೋಪಿ ಮಹಿಳೆಯಾಗಿದ್ದು, ಪಾಲಿ ಆರನೇ ಆರೋಪಿಯಾಗಿದ್ದಾರೆ ಎಂದು ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿರುವ ಉನ್ನೂಕಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆಯ ಪ್ರಕಾರ, ಈ ಘಟನೆಯು ಒಂದು ವರ್ಷದ ಹಿಂದೆ ದುಬೈನಲ್ಲಿ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.
ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿ ಬಹಿರಂಗವಾದ ನಂತರ ಹಲವು ನಟಿಯರಿಂದ ಲೈಂಗಿಕ ಕಿರುಕುಳ ಅಥವಾ ಅತ್ಯಾಚಾರದ ಆರೋಪಗಳನ್ನು ಎದುರಿಸುತ್ತಿರುವ ಅನೇಕ ನಟರು ಮತ್ತು ನಿರ್ದೇಶಕರಲ್ಲಿ ಪಾಲಿ ಕೂಡ ಒಬ್ಬರು.
ಮಲಯಾಳಂ ಚಿತ್ರರಂಗದಲ್ಲಿ ಹೀರೋಯಿನ್ಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಹಾಗೂ ಶೋಷಣೆಗಳ ಬಗ್ಗೆ ಈ ನ್ಯಾಯಮೂರ್ತಿ ಕೆ ಹೇಮಾ ಸಮಿತಿ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



