ದೇಶ

ದೆಹಲಿ-ವೈಜಾಗ್ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ!

ಬಂದರು ನಗರದಲ್ಲಿ ಲ್ಯಾಂಡಿಂಗ್ ಆದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಅದು ಸುಳ್ಳು ಎಂಬುದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ-ವೈಜಾಗ್ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮಂಗಳವಾರ ತಡರಾತ್ರಿ ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.

ಬಂದರು ನಗರದಲ್ಲಿ ಲ್ಯಾಂಡಿಂಗ್ ಆದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಅದು ಸುಳ್ಳು ಎಂಬುದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ಸಂದೇಶ ನೀಡಿತ್ತು ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ.

ವಿಮಾನ ಸುರಕ್ಷಿತವಾಗಿ ಬಂದಿಳಿದಿದ್ದು, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಇದು ಸುಳ್ಳು ಕರೆ ಎಂದು ಕಂಡುಬಂದಿದೆ ಎಂದು ರೆಡ್ಡಿ ಹೇಳಿದರು, ವೈಜಾಗ್‌ಗೆ ತೆರಳುತ್ತಿದ್ದ ವಿಮಾನದಲ್ಲಿ 107 ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನದಿಂದ ಪ್ರಯಾಣಿಕರನ್ನು ಇಳಿಸಿದ ನಂತರ ಮತ್ತು ಅದನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ನಿರ್ದೇಶಕರು ಹೇಳಿದರು. ಈ ಮಧ್ಯೆ ಮಧ್ಯರಾತ್ರಿ 12-30 ರ ಸುಮಾರಿಗೆ ವೈಜಾಗ್ ನಿಂದ ನಿರ್ಗಮಿಸಿದ ವಿಮಾನ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿಯಿತು ಎಂದು ಏರ್ ಇಂಡಿಯಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.