ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಯಂತ್ರದ ಬೆಲ್ಟ್ ಗೆ ಸಿಲುಕಿ ಬಾಲಕ ದುರ್ಮರಣ
ಟಿಫಿನ್ ಸರಬರಾಜು ಮಾಡುತ್ತಿದ್ದ ತನ್ನ ತಾಯಿ ಜೊತೆಗೆ ಬಿಸ್ಕೆಟ್ ಕಾರ್ಖಾನೆಗೆ ಹೋಗಿದ್ದ ಬಾಲಕ, ಯಂತ್ರದ ಬೆಲ್ಟ್‌ನಿಂದ ಬಿಸ್ಕೆಟ್ ತೆಗೆದುಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಸಿಲುಕಿದ್ದಾನೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸೋಮವಾರ ಅಂಬರನಾಥದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಯುಷ್ ಚೌಹಾಣ್ ಮೃತಪಟ್ಟ ಬಾಲಕನಾಗಿದ್ದಾನೆ. ಟಿಫಿನ್ ಸರಬರಾಜು ಮಾಡುತ್ತಿದ್ದ ತನ್ನ ತಾಯಿ ಜೊತೆಗೆ ಬಿಸ್ಕೆಟ್ ಕಾರ್ಖಾನೆಗೆ ಹೋಗಿದ್ದ ಬಾಲಕ, ಯಂತ್ರದ ಬೆಲ್ಟ್‌ನಿಂದ ಬಿಸ್ಕೆಟ್ ತೆಗೆದುಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಸಿಲುಕಿದ್ದಾನೆ.
ಕಾರ್ಖಾನೆಯ ಸಿಬ್ಬಂದಿ ಆತನನ್ನು ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



