Fake currency case: ಮದರಸಾದಲ್ಲಿ RSS 'ದಿ ಬಿಗ್ಗೆಸ್ಟ್ ಟೆರರಿಸ್ಟ್ ಆರ್ಗನೈಸೇಷನ್ ಇನ್ ದಿ ಕಂಟ್ರಿ' ಪುಸ್ತಕ ಪತ್ತೆ!
ಆರ್‌ಎಸ್‌ಎಸ್ ದಿ ಬಿಗ್ಗೆಸ್ಟ್ ಟೆರರಿಸ್ಟ್ ಆರ್ಗನೈಸೇಷನ್ ಇನ್ ದಿ ಕಂಟ್ರಿ (RSS: The Biggest Terrorist Organization in the Country) ಎನ್ನುವ ಪುಸ್ತಕವನ್ನು ಉರ್ದುವಿನಿಂದ ಹಿಂದಿಗೆ ತರ್ಜುಮೆ ಮಾಡಲಾಗಿದದ್ದು, ಈ ಪುಸ್ತಕವನ್ನು ಎಸ್ಎಂ ಮುಷರಫ್ ಎಂಬುವವರು ಬರೆದಿದ್ದಾರೆ.

ಪ್ರಯಾಗರಾಜ್ (ಉತ್ತರಪ್ರದೇಶ): ನಕಲಿ ನೋಟು ಮುದ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮದರಸಾವೊಂದರ ಮೇಲೆ ಶೋಧ ಕಾರ್ಯಾಚರಣೆ ನಡೆಸಿದ್ದು, ಪರಿಶೀಲನೆ ವೇಳೆ ಆರ್‌ಎಸ್‌ಎಸ್ ಅನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸುವ ಪುಸ್ತಕವೊಂದು ಸಿಕ್ಕಿದ್ದು, ಈ ಪುಸ್ಕತ ಇದೀಗ ವಿವಾದ ಸೃಷ್ಟಿಸಿದೆ.
ಆರ್‌ಎಸ್‌ಎಸ್ ದಿ ಬಿಗ್ಗೆಸ್ಟ್ ಟೆರರಿಸ್ಟ್ ಆರ್ಗನೈಸೇಷನ್ ಇನ್ ದಿ ಕಂಟ್ರಿ (RSS: The Biggest Terrorist Organization in the Country) ಎನ್ನುವ ಪುಸ್ತಕವನ್ನು ಉರ್ದುವಿನಿಂದ ಹಿಂದಿಗೆ ತರ್ಜುಮೆ ಮಾಡಲಾಗಿದದ್ದು, ಈ ಪುಸ್ತಕವನ್ನು ಎಸ್ಎಂ ಮುಷರಫ್ ಎಂಬುವವರು ಬರೆದಿದ್ದಾರೆ.
ಮದರಸಾದಲ್ಲಿ ಆರ್‌ಎಸ್‌ಎಸ್ ವಿರುದ್ಧ ಮಕ್ಕಳಲ್ಲಿ ವಿಷಬೀಜ ಬಿತ್ತಲು ಮೌಲ್ವಿ ಮೊಹಮ್ಮದ್ ತಫ್ಸೀರುಲ್ ಅರಿಫೀನ್ ಈ ಪುಸ್ತಕವನ್ನು ಬಳಕೆ ಮಾಡುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗಿವೆ.
ಆಗಸ್ಟ್ 28 ರಂದು ಅತರ್ಸುಯಿಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜತೆಗೆ, ಪೊಲೀಸರು ಪುಸ್ತಕವನ್ನು ಪತ್ತೆ ಮಾಡಿದ್ದಾರೆ ಎಂದು ಪ್ರಯಾಗರಾಜ್ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದರಸಾದಲ್ಲಿ ಈ ಪುಸ್ತಕ ಪತ್ತೆಯಾದ ಬೆನ್ನಲ್ಲೇ ಭದ್ರತಾ ಏಜೆನ್ಸಿಗಳು ಮತ್ತಷ್ಟು ಆ್ಯಕ್ಟಿವ್ ಆಗಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಶೋಧ ಕಾರ್ಯಾಚರಣೆಯಲ್ಲಿ 1 ಲಕ್ಷ ರೂಪಾಯಿಯ ನಕಲಿ ನೋಟುಗಳು ಮತ್ತು ಮುದ್ರಣಕ್ಕೆ ಬಳಸಲಾದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಗುಪ್ತಚರ ಘಟಕ (LIU) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ತಂಡಗಳು ಮಂಗಳವಾರ ಮದ್ರಸಾ ಸಿಬಂದಿಗಳನ್ನು ವಿಚಾರಣೆ ನಡೆಸಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



