ದೇಶ

ಕೋವಲಂ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು

ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.

ಕೋವಲಂ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಅಪಘಾತಕ್ಕೀಡಾದ ಕಾರು
Published On :

ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.

ಸೆಮ್ಮಂಚೇರಿ ಕುಪ್ಪಂ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಟ್ರಕ್‌ನ ಹಿಂಬದಿಯ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಕೆಟ್ಟು ಹೋಗಿದ್ದರಿಂದ ರಸ್ತೆ ಬದಿ ನಿಂತಿತ್ತು. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.