ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ವಾದವನ್ನು ಆಲಿಸಿದರು.
ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ ನಂತರ "ತೀರ್ಪನ್ನು ಕಾಯ್ದಿರಿಸಲಾಗಿದೆ" ಎಂದು ಪೀಠ ಹೇಳಿದೆ.
ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಜೂನ್ 26 ರಂದು ಬಂಧಿಸಿತ್ತು. ಆಗಸ್ಟ್ 5 ರಂದು ಸಿಬಿಐ ಕ್ರಮವನ್ನು ಎತ್ತಿ ಹಿಡಿದಿದ್ದ ದೆಹಲಿ ಹೈಕೋರ್ಟ್, ಮುಖ್ಯಮಂತ್ರಿಯ ಬಂಧನ ಕಾನೂನುಬದ್ಧವೆಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



