ಮುಂಬೈ: 14 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ; Video
ಮುಂಬೈಯ ಲೋವರ್ ಪರೇಲ್ ಪ್ರದೇಶದ ಕಮಲಾ ಮಿಲ್ಸ್ ಕಾಂಪೌಂಡ್‌ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಇಂದು ಬೆಳಗ್ಗೆ 6.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈಯ 14 ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.
ಮುಂಬೈಯ ಲೋವರ್ ಪರೇಲ್ ಪ್ರದೇಶದ ಕಮಲಾ ಮಿಲ್ಸ್ ಕಾಂಪೌಂಡ್‌ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಇಂದು ಬೆಳಗ್ಗೆ 6. 30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯು 3 ಮತ್ತು 7 ನೇ ಮಹಡಿಗಳ ನಡುವೆ ಬೆಂಕಿ ಹೊತ್ತಿ ಉರಿಯಿತು. ಅಗ್ನಿಶಾಮಕ ದಳದವರು ಉಳಿ ಮತ್ತು ಸುತ್ತಿಗೆ ಬಳಸಿ ಬಾಗಿಲುಗಳ ಬೀಗಗಳನ್ನು ಮುರಿದು ಬೆಂಕಿಯನ್ನು ನಂದಿಸಲು ಕಟ್ಟಡವನ್ನು ಪ್ರವೇಶಿಸಿದರು ಎಂದು ತಿಳಿಸಿದರು. ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸಲು ಹರಸಾಹಸಪಡಬೇಕಾಯಿತು.
ಕಮಲಾ ಮಿಲ್ಸ್ ಕಾಂಪೌಂಡ್ ಈ ಹಿಂದೆ ಅನೇಕ ಪ್ರಮುಖ ಬೆಂಕಿ ಅನಾಹುತಗಳಿಗೆ ಸಾಕ್ಷಿಯಾಗಿದೆ, ಪಾರ್ಕ್‌ಸೈಡ್ ವಸತಿ ಕಟ್ಟಡದ ಪಕ್ಕದಲ್ಲಿದೆ. ಅಕ್ಕಪಕ್ಕದ ನಿವಾಸಿಗಳು ಬೆಂಕಿ ಜ್ವಾಲೆ ಮತ್ತು ಹೊಗೆ ಕಂಡು ಹೌಹಾರಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವ ಮೊದಲು ಭದ್ರತಾ ಸಿಬ್ಬಂದಿ ತಮ್ಮ ಕಟ್ಟಡದ ಅಗ್ನಿಶಾಮಕ ಸಾಧನಗಳೊಂದಿಗೆ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


