ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ
ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ

ಬಲೋದಬಜಾರ್: ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಡಿಶಾದಲ್ಲಿ ಸಿಡಿಲು ಬಡಿದು 6 ಮಂದಿ ಸಾವು
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳು ಸಿಡಿಲು ಬಡಿದಾಗ ಭಾರಿ ಮಳೆಯ ನಡುವೆ ತಮ್ಮ ಹೊಲದ ಬಳಿಯ ಕೆರೆಯಂಚಿನಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


