ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಹದಿಹರೆಯದ ಯುವತಿ ಮೇಲೆ ಅತ್ಯಾಚಾರ, ಇಬ್ಬರ ಬಂಧನ
ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರು.

ಗೊಂಡಾ: 17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ.
ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸ್ಟೇಷನ್ ಹೌಸ್ ಆಫೀಸರ್ ಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರವೆಸಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಆರೋಪಿಗಳು ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಯುವತಿ ಹೇಗೋ ತನ್ನ ಮನೆಗೆ ಬಂದು ಘಟನೆಯ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪಾಠಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



