ಗ್ವಾಲಿಯರ್: ಗುಂಡಿಗಳಿದ್ದ ರಸ್ತೆಯಲ್ಲಿ ಕುಸಿದು ಬಿದ್ದ 22 ಅಡಿ ಎತ್ತರದ ಗಣೇಶ ಮೂರ್ತಿ
ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಭೋಪಾಲ್: ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಭಾನುವಾರ ರಾತ್ರಿ ಗಣೇಶ ಉತ್ಸವದ ಮೆರವಣಿಗೆ ವೇಳೆ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ 22 ಅಡಿ ಎತ್ತರದ ಗಣೇಶನ ವಿಗ್ರಹ ಕುಸಿದು ಬಿದ್ದ ಘಟನೆ ನಡೆದಿದೆ.
ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವರದಿಯಾಗಿದೆ.
ಖಲ್ಲಾಸಿಪುರ ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ವಿಗ್ರಹವನ್ನು ಜಿವಾಜಿಗಂಜ್‌ನಿಂದ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ಮೂರ್ತಿ ಕೆಳಗೆ ಬಿದ್ದಿದೆ ಎಂದು ಆರೋಪಿಸಲಾಗಿದೆ.
ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು, ರಸ್ತೆ ದುಸ್ಥಿತಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
“ಅನೇಕ ದಿನಗಳ ಪರಿಶ್ರಮದಿಂದ ಈ ದೈತ್ಯ ಗಣಪತಿಯ ವಿಗ್ರಹದ ತಯಾರಿಸಲಾಗಿದೆ. ಆದರೆ ಈಗ ಅದು ತುಂಡು ತುಂಡಾಗಿದೆ. ನಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ನಮಗೆ ಪದಗಳೇ ಇಲ್ಲ. ಸ್ಥಳೀಯ ಆಡಳಿತದ ನಿರ್ಲಕ್ಷದಿಂದ ಇದು ನಡೆದಿದೆ’ ಎಂದು ಗಣೇಶ ಪೂಜಾ ಕ್ಲಬ್‌ನ ಸದಸ್ಯ ರಿತಿಕ್ ಗೋಯಲ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



