ಧಾರ್ಮಿಕ ಪ್ರವಾಸಗಳ ಹೆಲಿಕಾಪ್ಟರ್ ಸೇವೆಗೆ GST ಶೇ.5 ಕ್ಕೆ ಇಳಿಕೆ!
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್ ಟಿ ಕೌನ್ಸಿಲ್ ನ 54 ನೇ ಸಭೆ ಇಂದು ನಡೆಯಿತು.

ನವದೆಹಲಿ: ಧಾರ್ಮಿಕ ಪ್ರವಾಸಗಳ ಹೆಲಿಕಾಪ್ಟರ್ ಸೇವೆಗಳಿಗೆ ಜಿಎಸ್ ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಲು ಜಿಎಸ್ ಟಿ ಕೌನ್ಸಿಲ್ ನಿರ್ಧಾರ ಕೈಗೊಂಡಿದೆ ಎಂದು ಉತ್ತರಾಖಂಡ್ ನ ಆರ್ಥಿಕ ಸಚಿವ ಪ್ರೇಮ್ ಚಂದ್ ಅಗರ್ವಾಲ್ ಹೇಳಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್ ಟಿ ಕೌನ್ಸಿಲ್ ನ 54 ನೇ ಸಭೆ ಇಂದು ನಡೆಯಿತು.
"ಕೇದಾರನಾಥ, ಬದರಿನಾಥ್ ನಂತಹ ಧಾರ್ಮಿಕ ಉದ್ದೇಶಗಳಿಗೆ ಹೆಲಿಕಾಪ್ಟರ್ ಸೇವೆಗಳನ್ನು ಬಳಸುವುದಕ್ಕೆ ಈಗ ಶೇ.18 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿದೆ. ಇನ್ನು ಮುಂದೆ ಅದನ್ನು ಶೇ.5ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಅಗರ್ವಾಲ್ ಹೇಳಿದ್ದಾರೆ.

ಗುಜರಾತ್ ಕರಾವಳಿ ತೀರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿ ನಾಪತ್ತೆ, ತೀವ್ರ ಹುಡುಕಾಟ
ಕೌನ್ಸಿಲ್ ಜೀವ ಮತ್ತು ಆರೋಗ್ಯ ವಿಮಾ ಕಂತುಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡುವುದು, ಹಾಗೆಯೇ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೂಲಕ ರೂ 2,000 ವರೆಗಿನ ಸಣ್ಣ ಡಿಜಿಟಲ್ ವಹಿವಾಟುಗಳಿಗೆ ಪಾವತಿ ಅಗ್ರಿಗೇಟರ್ಗಳ ಮೇಲೆ ಜಿಎಸ್ಟಿ ವಿಧಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲು ನಿರ್ಧರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


