ಎಸ್ ಪಿ ಶಾಸಕನ ಮನೆಯಲ್ಲಿ ಕೆಲಸದಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ನಗರದ ಮಲಿಕಾನ ಬಡಾವಣೆಯಲ್ಲಿರುವ ಶಾಸಕರ ಮನೆಯ ಮೇಲಿನ ಕೊಠಡಿಯಲ್ಲಿ ವಾಸವಿದ್ದ ನಾಜಿಯಾ (18) ಅವರ ಮೃತದೇಹ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಲಖನೌ: ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸದಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭದೋಹಿಯಲ್ಲಿರುವ ಶಾಸಕನ ಮನೆಯಲ್ಲಿ ಮನೆಕೆಲಸದಾಕೆಯ ಶವ ಪತ್ತೆಯಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.
ಮೃತ ನಾಜಿಯಾ ಎಂಬ ಮಹಿಳೆ ಹಲವು ವರ್ಷಗಳಿಂದ ಶಾಸಕ ಜಿಹಾದ್ ಬೇಗ್ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯ ಕುಟುಂಬ ಸದಸ್ಯರು ಮಾಮ್‌ದೇವ್ ಪ್ರದೇಶದ ಕಾನ್ಶಿರಾಮ್ ಹೌಸಿಂಗ್‌ನಲ್ಲಿ ನೆಲೆಸಿದೆ ಎಂದು ಸರ್ಕಲ್ ಆಫೀಸರ್ ಅಜಯ್ ಕುಮಾರ್ ಚೌಹಾಣ್ ತಿಳಿಸಿದ್ದಾರೆ.
ನಗರದ ಮಲಿಕಾನ ಬಡಾವಣೆಯಲ್ಲಿರುವ ಶಾಸಕರ ಮನೆಯ ಮೇಲಿನ ಕೊಠಡಿಯಲ್ಲಿ ವಾಸವಿದ್ದ ನಾಜಿಯಾ (18) ಅವರ ಮೃತದೇಹ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಬೇಗ್ ಅವರು ಭದೋಹಿ ಸದರ್ ಕ್ಷೇತ್ರದಿಂದ ಎಸ್‌ಪಿ ಶಾಸಕರಾಗಿದ್ದಾರೆ.
ಇಂದು ಬೆಳಗ್ಗೆ ನಾಜಿಯಾ ಬಹಳ ಹೊತ್ತಾದರೂ ಏಳದೇ ಇದ್ದಾಗ ಶಾಸಕರ ಮನೆಯವರು ಒಳಗೆ ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಮತ್ತು ನಾಜಿಯಾ ಅವರ ದೇಹವು ಆಕೆಯ ದುಪಟ್ಟಾದಿಂದ ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದು ಕಂಡುಬಂದಿದೆ ಎಂದು ಚೌಹಾಣ್ ಹೇಳಿದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲು ಒಡೆದು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



