ಆಂಧ್ರ ಪ್ರದೇಶದ ದೇವರಪಲ್ಲಿ ಬಳಿ ಭೀಕರ ಅಪಘಾತ: 7 ಕಾರ್ಮಿಕರು ಸಾವು
ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದೇವರಪಲ್ಲಿ(ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಚಿನ್ನಾಯಗುಡೆಂ ಉಪನಗರದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಅಪಘಾತವಾದ ಲಾರಿಯಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ಮೃತರನ್ನು ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


