ಸಿಎಂ ಕೇಜ್ರಿವಾಲ್'ಗೆ ಜಾಮೀನು ಮಂಜೂರು: ಬಿಜೆಪಿ ಪ್ಲಾನ್ ವಿಫಲ- ಸುನೀತಾ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಾಗ್ದಾಳಿ
ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.

ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದ ನಂತರ ಬಿಜೆಪಿಯ ಪ್ಲಾನ್ ವಿಫಲವಾಗಿದೆ ಎಂದು ಸುನೀತಾ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಮಾರು 18 ತಿಂಗಳ ಬಳಿಕ ಕಳೆದ ತಿಂಗಳು ಜೈಲಿನಿಂದ ಬಿಡುಗಡೆಯಾದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ ರೀತಿ, ಅವರನ್ನು ಜೈಲಿನಲ್ಲಿಡುವ ಉದ್ದೇಶದಿಂದ ಬಂಧನ ಮಾಡಿದಂತೆ ಕಾಣುತ್ತಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಕೇಜ್ರಿವಾಲ್ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯ ಕಾರಣದಿಂದ ಸಿಬಿಐ ಬಂಧಿಸಿ ಜೈಲಿನಲ್ಲಿಟ್ಟು ಎಂದು ಆರೋಪಿಸಿದರು.
ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧನಕ್ಕೊಳಪಡಿಸಿತ್ತು. 10 ದಿನಗಳ ವಿಚಾರಣೆಯ ನಂತರ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು. ಜೈಲಿನಲ್ಲಿ ಕಳೆದ ಒಟ್ಟು ಸಮಯ 177 ದಿನಗಳು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



