ಛತ್ತೀಸ್‌ಗಢ: ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ
ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲೀಯ ಮುಖಂಡರೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಗುಂಡಿನ ಚಕಮಕಿ ಸ್ಥಗಿತದ ನಂತರ ಸ್ಥಳದಿಂದ ನಕ್ಸಲೀಯನ ಮೃತದೇಹ, ಶಸ್ತ್ರಾಸ್ತ್ರ ಮತ್ತು ಮಾವೋವಾದಿ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲೀಯನ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಘಟನೆಯೊಂದಿಗೆ ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ವಿಭಾಗದಲ್ಲಿ ಈ ವರ್ಷ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 154 ನಕ್ಸಲೀಯರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



