ದೇಶದ ಇತರ ಭಾಗ, ವಿದೇಶಗಳಿಗೆ ಭೇಟಿ ನೀಡುವ ಪ್ರಧಾನಿ ಮೋದಿ, ಉದ್ದೇಶಪೂರ್ವಕವಾಗಿ ಮಣಿಪುರಕ್ಕೆ ತೆರಳುತ್ತಿಲ್ಲ: ಕಾಂಗ್ರೆಸ್
2023ರ ಮೇ 3ರಂದು ಮಣಿಪುರ ಹೊತ್ತಿ ಉರಿಯಲು ಆರಂಭಿಸಿತು. 2023ರ ಜೂನ್ 4ರಂದು ಹಿಂಸಾಚಾರ, ಗಲಭೆಗೆ ಕಾರಣಗಳು ಮತ್ತು ಹರಡುವಿಕೆ ಕುರಿತು ತನಿಖೆ ನಡೆಸಲು ಮೂವರು ಸದಸ್ಯರ ತನಿಖಾ ಆಯೋಗವನ್ನು ರಚಿಸಲಾಗಿದೆ.

ನವದೆಹಲಿ: ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ದೇಶದ ಇತರ ಭಾಗಗಳು ಮತ್ತು ವಿದೇಶಗಳಿಗೆ ಪ್ರವಾಸವನ್ನು ಮುಂದುವರೆಸಿರುವ ಪ್ರಧಾನಿ, ಹೆಚ್ಚಿನ ತೊಂದರೆ ಪೀಡಿತ ರಾಜ್ಯದ ಭೇಟಿಯನ್ನು ಉದ್ದೇಶ ಪೂರ್ವಕವಾಗಿ ತಡೆಯುತ್ತಿದ್ದಾರೆ ಎಂದು ಕಿಡಿಕಾರಿದೆ.
2023ರ ಮೇ 3ರಂದು ಮಣಿಪುರ ಹೊತ್ತಿ ಉರಿಯಲು ಆರಂಭಿಸಿತು. 2023ರ ಜೂನ್ 4ರಂದು ಹಿಂಸಾಚಾರ, ಗಲಭೆಗೆ ಕಾರಣಗಳು ಮತ್ತು ಹರಡುವಿಕೆ ಕುರಿತು ತನಿಖೆ ನಡೆಸಲು ಮೂವರು ಸದಸ್ಯರ ತನಿಖಾ ಆಯೋಗವನ್ನು ರಚಿಸಲಾಗಿದೆ.
ಆಯೋಗಕ್ಕೆ ವರದಿ ಸಲ್ಲಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಇದುವರೆಗೆ ಯಾವುದೇ ವರದಿ ಸಲ್ಲಿಸಿಲ್ಲ. ಆಯೋಗಕ್ಕೆ 2024ರ ನವೆಂಬರ್ 24ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.
ಈ ಮಧ್ಯೆ ಮಣಿಪುರದ ಜನರ ನೋವು, ಸಂಕಟ ಅಡೆತಡೆಯಿಲ್ಲದೆ ಮುಂದುವರಿದಿದೆ. ಜೀವ ವಿಲ್ಲದ ಪ್ರಧಾನಿ ಅತ್ಯಂತ ತೊಂದರೆಗೀಡಾದ ರಾಜ್ಯಕ್ಕೆ ಭೇಟಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವ ಮೂಲಕ ದೇಶದ ಇತರ ಭಾಗಗಳು ಮತ್ತು ವಿದೇಶಗಳ ಭೇಟಿಯನ್ನು ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಜೈರಾಮ್ ರಮೇಶ್ ಫೋಸ್ಟ್ ಮಾಡಿದ್ದಾರೆ.
ಮಣಿಪುರದಲ್ಲಿ ಇದುವರೆಗೆ 220 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಸರಣಿ ಹಿಂಸಾಚಾರದ ತನಿಖೆಗಳ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ತನಿಖಾ ಆಯೋಗಕ್ಕೆ ನವೆಂಬರ್ 20 ರವರೆಗೆ ಸಮಯ ನೀಡಿದ ಬೆನ್ನಲ್ಲೇ ಜೈರಾಮ್ ರಮೇಶ್ ಈ ಹೇಳಿಕೆ ನೀಡಿದ್ದಾರೆ.
ಗುವಾಹಟಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಯ್ ಲಂಬಾ ನೇತೃತ್ವದ ಆಯೋಗವನ್ನು ಜೂನ್ 4, 2023 ರಂದು ರಚಿಸಲಾಯಿತು. ನಿವೃತ್ತ ಐಎಎಸ್ ಅಧಿಕಾರಿ ಹಿಮಾಂಶು ಶೇಖರ್ ದಾಸ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಅಲೋಕ ಪ್ರಭಾಕರ್ ಅವರನ್ನೊಳಗೊಂಡ ಸಮಿತಿಯು ಮೇ 3 ರಿಂದ ಮಣಿಪುರದಲ್ಲಿ ವಿವಿಧ ಸಮುದಾಯಗಳ ಸದಸ್ಯರನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರ, ಗಲಭೆಗೆ ಕಾರಣಗಳು ಮತ್ತು ಪ್ರಸರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕಡ್ಡಾಯಮಾಡಲಾಗಿದೆ.
ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈಟೈಸ್ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 220 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



