ದೇಶ

ಉತ್ತರ ಪ್ರದೇಶ: ಮೀರತ್ ನಲ್ಲಿ ಕಟ್ಟಡ ಕುಸಿತ; 3 ಸಾವು, ಅವಶೇಷಗಳಡಿ ಸಿಲುಕಿದ 7 ಮಂದಿ

ಶನಿವಾರದಂದು ಮೀರಟ್ ನಲ್ಲಿ ಈ ಘಟನೆ ನಡೆದಿದ್ದು, "ಮನೆಯ ಕಟ್ಟಡವೊಂದು ಹಠಾತ್ ಕುಸಿತದಿಂದ ಈ ಅನಾಹುತ ಸಂಭವಿಸಿದೆ.

ಉತ್ತರ ಪ್ರದೇಶ: ಮೀರತ್ ನಲ್ಲಿ ಕಟ್ಟಡ ಕುಸಿತ; 3 ಸಾವು, ಅವಶೇಷಗಳಡಿ ಸಿಲುಕಿದ 7 ಮಂದಿ
ಕಟ್ಟಡ ಕುಸಿತ (ಸಂಗ್ರಹ ಚಿತ್ರ) — online desk
Published On :

ಮೀರಟ್ : ಉತ್ತರ ಪ್ರದೇಶದ ಈ ಜಿಲ್ಲೆಯಲ್ಲಿ ಮೂರು ಅಂತಸ್ತಿನ ಮನೆ ಕುಸಿದು 3 ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರೆ, 7 ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಶನಿವಾರದಂದು ಮೀರಟ್ ನಲ್ಲಿ ಈ ಘಟನೆ ನಡೆದಿದ್ದು, "ಮನೆಯ ಕಟ್ಟಡವೊಂದು ಹಠಾತ್ ಕುಸಿತದಿಂದ ಈ ಅನಾಹುತ ಸಂಭವಿಸಿದೆ. 12 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಇದುವರೆಗೆ, 5 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಅವರಲ್ಲಿ, ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡವರನ್ನು ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಜೆ 5:15 ರ ಸುಮಾರಿಗೆ ಘಟನೆ ಸಂಭವಿಸಿದ್ದು, ತುರ್ತು ಸೇವೆಗಳಿಗೆ ತಕ್ಷಣ ಮಾಹಿತಿ ನೀಡಲಾಗಿದೆ. ಜಾಕಿರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ಆರಂಭದಲ್ಲಿ ಸುಮಾರು ಆರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.