ಮಹಾರಾಷ್ಟ್ರ: ಧುಲೆಯಲ್ಲಿ ಕಾರು-ವ್ಯಾನ್ ಡಿಕ್ಕಿ, ಐವರು ಸಾವು, ನಾಲ್ವರಿಗೆ ಗಾಯ
ವ್ಯಾನ್ ಕಾರಿಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಭಾನುವಾರ ವ್ಯಾನ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಂಡಖೇಡ ತಾಲೂಕಿನ ದಾಸ್ವೆಲ್ ಫಟಾದಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವ್ಯಾನ್ ಕಾರಿಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ವ್ಯಾನ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದೆ. ಆತನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಕುರಿತು ನಾರ್ದಾನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



