ದೇಶ

ಕೋಲ್ಕತ್ತಾ: ಅನಾರೋಗ್ಯ ಪೀಡಿತ ಮಗನ ಪಕ್ಕದಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರ!

ಆರೋಪಿ ತನಯ್ ಪಾಲ್ (26) ಆಸ್ಪತ್ರೆಯ ಮಾಜಿ ವಾರ್ಡ್ ಬಾಯ್ ಆಗಿದ್ದು, ವಾರ್ಡ್ ಗೆ ನುಗ್ಗಿದ ಆತ ಮಲಗಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಆಕೆಯನ್ನು ವಿವಸ್ತ್ರಗೊಳಿಸಿದ್ದಾನೆ.

ಕೋಲ್ಕತ್ತಾ: ಅನಾರೋಗ್ಯ ಪೀಡಿತ ಮಗನ ಪಕ್ಕದಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರ!
ಅತ್ಯಾಚಾರ ಆರೋಪ (ಸಂಗ್ರಹ ಚಿತ್ರ) — online desk
Published On :

ಕೋಲ್ಕತ್ತ: ಅನಾರೋಗ್ಯ ಪೀಡಿತ ಪುತ್ರನ ಪಕ್ಕದಲ್ಲಿದ್ದ ಮಹಿಳೆ ಮೇಲೆ ಆಸ್ಪತ್ರೆಯ ನೌಕರನೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಮಹಿಳೆ ನೀಡಿರುವ ದೂರಿನ ಪ್ರಕ್ರಾರ, ಕೋಲ್ಕತ್ತಾದ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ತನಯ್ ಪಾಲ್ (26) ಆಸ್ಪತ್ರೆಯ ಮಾಜಿ ವಾರ್ಡ್ ಬಾಯ್ ಆಗಿದ್ದು, ವಾರ್ಡ್ ಗೆ ನುಗ್ಗಿದ ಆತ ಮಲಗಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಆಕೆಯನ್ನು ವಿವಸ್ತ್ರಗೊಳಿಸಿದ್ದಾನೆ.

ಕೋಲ್ಕತ್ತಾದಲ್ಲಿ ಆರ್ ಜಿ ಕರ್ ಆಸ್ಪತ್ರೆಯ ಕಿರಿಯ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ ನಡೆದ ಕೆಲವೇ ವಾರದಲ್ಲಿ ಈ ಹೇಯ ಕೃತ್ಯವೂ ಬಹಿರಂಗವಾಗಿದೆ. ಇಂಡಿಯಾ ಟುಡೆ ವರದಿಯ ಪ್ರಕಾರ, ಮಹಿಳೆ ನೀಡಿದ ದೂರನ್ನು ಆಧರಿಸಿ ಪೊಲೀಸ್ ಅಧಿಕಾರಿಗಳು ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರು ಪಾಲ್ ನ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದು ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.