ದೇಶ

ಉತ್ತರ ಪ್ರದೇಶ: ಫಿರೋಜಾಬಾದ್‌ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರು ಸಾವು,11 ಮಂದಿಗೆ ಗಾಯ

ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಉತ್ತರ ಪ್ರದೇಶ: ಫಿರೋಜಾಬಾದ್‌ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರು ಸಾವು,11 ಮಂದಿಗೆ ಗಾಯ
ಸ್ಫೋಟ ಸಂಭವಿಸಿದ ಸ್ಥಳದಲ್ಲಿನ ರಕ್ಷಣಾ ಕಾರ್ಯಾಚರಣೆ ಚಿತ್ರ
Published On :

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪಟಾಕಿಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟಾಕಿ ಸಂಗ್ರಹಿಸಿದ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಮನೆ ಸಮೀಪದ ಮೇಲ್ಛಾವಣಿ ಕುಸಿದಿದೆ. ಪೊಲೀಸರು ಅವಶೇಷಗಳಡಿ ಸಿಲುಕಿದ 10 ಜನರನ್ನು ಹೊರಗೆ ತೆಗೆದಿದ್ದು, ಆರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಆಗ್ರಾ ರೇಂಜ್ ಐಜಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಸ್ಫೋಟದಿಂದಾಗಿ ಮನೆ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ತಂಡ ಸ್ಥಳದಲ್ಲಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಕುಮಾರ್ ಹೇಳಿದರು. ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಮೇಶ್ ರಂಜನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.