ದೇಶ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ: ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!

ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ: ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!
ಅತಿಶಿ
Published On :

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ.

ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

ಎಂಎಸ್ ಅತಿಶಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅತಿಶಿ ಪ್ರಸ್ಸುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ವಿದ್ವಾಂಸರಾಗಿದ್ದಾರೆ.

ಕಲ್ಕಾಜಿಯ ಶಾಸಕರಾಗಿದ್ದ 43 ವರ್ಷದ ಅತಿಶಿ, ದೆಹಲಿಯ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಸಚಿವರಾಗಿದ್ದರು.

ಕೇಜ್ರಿವಾಲ್ ಮತ್ತು ಸಿಸೋಡಿಯಾ ಜೈಲಿನಲ್ಲಿದ್ದಾಗ ಅತಿಶಿ ಪಕ್ಷದ ಕಾರ್ಯಕ್ರಮಗಳು ಮತ್ತು ಮಾಧ್ಯಮ ಸಂವಾದದಲ್ಲಿ ಪಕ್ಷದ ನಿಲುವನ್ನು ಸ್ಪಷ್ಪಡಿಸುವ ಮೂಲಕ ಬಿಜೆಪಿ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಅರವಿಂದ್ ಕೇಜ್ರಿವಾಲ್ ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಜನರು ಪ್ರಾಮಾಣಿಕತೆ ಪ್ರಮಾಣ ಪತ್ರ ನೀಡಿದಾಗ ಮಾತ್ರ ಸಿಎಂ ಕುರ್ಚಿ ಮೇಲೆ ಕೂರುತ್ತೇನೆ ಎಂದು ಅವರು ಹೇಳಿದ್ದರು.

ಹೀಗಾಗಿ ಸೆಪ್ಟೆಂಬರ್ 26 ಮತ್ತು 27ರಂದು ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ. ಅರವಿಂದ್ ಕೇಜ್ರಿವಾಲ್ ಇಂದು ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.