ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ನವದೆಹಲಿ: ಜನಗಣತಿ ವಿಚಾರದಲ್ಲಿ ದೇಶದಲ್ಲಿ ಪ್ರತಿದಿನ ರಾಜಕೀಯ ನಡೆಯುತ್ತಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದಲ್ಲಿ ಜನಗಣತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಆದರೆ, ಯಾವ ನಡೆಸಲಾಗುತ್ತದೆ ಎಂಬುದಕ್ಕೆ ಸ್ಪಷ್ಟನೆ ನೀಡಿಲ್ಲ.
ಇತ್ತೀಚೆಗೆ ದೇಶದಲ್ಲಿ ಜನಗಣತಿಗೆ ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳು ಬಂದಿದ್ದವು. ಜನಗಣತಿ ಕುರಿತು ಪ್ರಶ್ನೆಯನ್ನು ಕೇಳಿದಾಗ, ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ಶಾ ಹೇಳಿದರು. 2011ರಿಂದ ದೇಶದಲ್ಲಿ ಜನಗಣತಿ ನಡೆದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ಕುರಿತು ಸುದ್ದಿಗೋಷ್ಠಿಯಲ್ಲಿ ಅಮಿತ್ ಶಾ ಅವರು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಭಾಗವಹಿಸಿದರು. ಈ ವೇಳೆ ಅವರು ಜಾತಿ ಆಧಾರಿತ ಜನಗಣತಿಯ ಬಗ್ಗೆಯೂ ಮಾತನಾಡಿದರು. ಜನಗಣತಿಯನ್ನು ಘೋಷಿಸಿದಾಗ, ನಾವು ಎಲ್ಲಾ ಮಾಹಿತಿಯನ್ನು ಸಾರ್ವಜನಿಕಗೊಳಿಸುತ್ತೇವೆ' ಎಂದು ಅವರು ಹೇಳಿದರು.
ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.
ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ರಾಜಕೀಯ ಪಕ್ಷಗಳ ಆಗ್ರಹದ ನಡುವೆಯೇ ಶಾ ಈ ಹೇಳಿಕೆ ನೀಡಿದ್ದಾರೆ. ಹೊಸ ಮಾಹಿತಿಯ ಅನುಪಸ್ಥಿತಿಯಲ್ಲಿ, ಸರ್ಕಾರಿ ಏಜೆನ್ಸಿಗಳು ಇನ್ನೂ ನೀತಿಗಳನ್ನು ರೂಪಿಸುತ್ತಿವೆ. 2011ರ ಜನಗಣತಿಯ ಮಾಹಿತಿಯ ಆಧಾರದ ಮೇಲೆ ಸಬ್ಸಿಡಿಗಳನ್ನು ಹಂಚಿಕೆ ಮಾಡುತ್ತಿವೆ ಎಂದರು.
ಸಂಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆಗೆ ಸರ್ಕಾರವು 12,000 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದ್ದು, ಈ ಮೂಲಕ ನಾಗರಿಕರು ತಮ್ಮನ್ನು ತಾವು ಎಣಿಸುವ ಅವಕಾಶವನ್ನು ಪಡೆಯುತ್ತಾರೆ. ಇದಕ್ಕಾಗಿ ಜನಗಣತಿ ಪ್ರಾಧಿಕಾರವು ಸ್ವಯಂ ಗಣತಿ ಪೋರ್ಟಲ್ ಸಿದ್ಧಪಡಿಸಿದ್ದು, ಇನ್ನೂ ಬಿಡುಗಡೆ ಮಾಡಿಲ್ಲ. ಸ್ವಯಂ-ಎಣಿಕೆಯ ಸಮಯದಲ್ಲಿ ಆಧಾರ್ ಅಥವಾ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



