ದೇಶ

ಬುಲ್ಡೋಜರ್ ನ್ನೇ ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಆಘಾತ: ಅಖಿಲೇಶ್ ಯಾದವ್

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಬುಲ್ಡೋಜರ್ ನ್ನೇ ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಆಘಾತ: ಅಖಿಲೇಶ್ ಯಾದವ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್- ಅಖಿಲೇಶ್ ಯಾದವ್ — online desk
Published On :

ಲಖನೌ: ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿರುವುದಕ್ಕೆ ಅ.1 ವರೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿರುವುದರ ಬಗ್ಗೆ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ.

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

"ಬುಲ್ಡೋಜಿಂಗ್" ಚಿಂತನೆಯನ್ನು ಕೆಡವಲಾಗಿದೆ ಎಂದು ಹೇಳಿರುವ ಅಖಿಲೇಶ್ ಯಾದವ್, ಬುಲ್ಡೋಜರ್ ಹೆಸರನ್ನು ಬದಲಾಯಿಸಬಹುದೇ? ಎಂದು ಕೇಳಿದ್ದಾರೆ.

ಬುಲ್ಡೋಜರ್ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದೆ. ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅಲ್ಲದೆ ಕಾನೂನು ಪ್ರಕ್ರಿಯೆಯಂತೆ ಮಾತ್ರ ಅತಿಕ್ರಮಣ ತೆಗೆಯಬೇಕು ಎಂದು ಆದೇಶಿಸಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಯಾದವ್, ಎಕ್ಸ್‌ ಪೋಸ್ಟ್‌ನಲ್ಲಿ, ಆದಿತ್ಯನಾಥ್ ಅವರ ಹೆಸರನ್ನು ಉಲ್ಲೇಖಿಸದೆಯೇ ವಾಗ್ದಾಳಿ ನಡೆಸಿದ್ದಾರೆ ಮತ್ತು "ನ್ಯಾಯದ ಸುಪ್ರೀಂ ಆದೇಶವು ಬುಲ್ಡೋಜರ್ ನ್ನು ಮಾತ್ರವಲ್ಲದೆ ಬುಲ್ಡೋಜರ್ ಅನ್ನು ದುರುಪಯೋಗಪಡಿಸಿಕೊಂಡವರ ವಿನಾಶಕಾರಿ ರಾಜಕೀಯವನ್ನೂ ಬದಿಗೊತ್ತಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.