ಕೇರಳದಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ!
ಕೆಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ ರೋಗಿ ಅನಾರೋಗ್ಯಕ್ಕೆ ಒಳಗಾದ ನಂತರ ಮೊದಲಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿತ್ತು.

ಮಲ್ಲಪುರಂ: ಕೇರಳದಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಇತ್ತೀಚೆಗೆ ವಿದೇಶದಿಂದ ಮರಳಿದ ವ್ಯಕ್ತಿಯೊಬ್ಬರಲ್ಲಿ ಈ ಸೋಂಕಿನ ರೋಗಲಕ್ಷಣಗಳು ಕಂಡುಬಂದಿವೆ.
ಕೆಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ ರೋಗಿ ಅನಾರೋಗ್ಯಕ್ಕೆ ಒಳಗಾದ ನಂತರ ಮೊದಲಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿತ್ತು. ಇದು ಮಂಕಿಪಾಕ್ಸ್ ಪ್ರಕರಣವಾಗಿರಬಹುದೆಂದು ಭಾವಿಸಿ, ಅವರ ಮಾದರಿಗಳನ್ನು ಪರೀಕ್ಷೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಮಂಕಿ ಪಾಕ್ಸ್ ಪ್ರಕರಣ ವರದಿಯಾಗಿತ್ತು.ಹರಿಯಾಣದ ಹಿಸಾರ್‌ನ 26 ವರ್ಷದ ಯುವಕನೊಬ್ಬರಲ್ಲಿ ಪಾಸಿಟಿವ್ ಕಂಡುಬಂದ ನಂತರ ಅವರನ್ನು ದೆಹಲಿಯ ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜುಲೈ 2022 ರಿಂದ ಭಾರತದಲ್ಲಿ ವರದಿಯಾದ ಹಿಂದಿನ 30 ಪ್ರಕರಣಗಳಂತೆಯೇ ಇದನ್ನು ಪ್ರತ್ಯೇಕ ಪ್ರಕರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಕರೆದಿದೆ ಮತ್ತು ಇದು ಮಂಕಿಪಾಕ್ಸ್ ಸೋಂಕಿನ ಕ್ಲಾಡ್ 1 ರ ಬಗ್ಗೆ WHO ವರದಿ ಮಾಡಿರುವ ಪ್ರಸ್ತುತ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಭಾಗವಾಗಿಲ್ಲ ಎಂದು ಹೇಳಿದೆ. 26 ವರ್ಷದ ಹಿಸಾರ್ ನಿವಾಸಿಯಲ್ಲಿ ಪಶ್ಚಿಮ ಆಫ್ರಿಕಾದ ಕ್ಲಾಡ್-2 ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.
ವಿಶ್ವ ಆರೋಗ್ಯ ಸಂಸ್ಥೆ ಕಳೆದ ತಿಂಗಳು ಎರಡನೇ ಬಾರಿಗೆ ಮಂಕಿ ಪಾಕ್ಸ್ ಜಾಗತಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿತ್ತು. ಮಂಕಿ ಪಾಕ್ಸ್ ಸೋಂಕು ಸಾಮಾನ್ಯವಾಗಿ ಸ್ವಯಂ-ಸೀಮಿತವಾಗಿದ್ದು, ಎರಡು ಮತ್ತು ನಾಲ್ಕು ವಾರಗಳ ನಡುವೆ ಇರುತ್ತದೆ ರೋಗಿಗಳು ಸಾಮಾನ್ಯವಾಗಿ ಆರೈಕೆ ಮತ್ತು ನಿರ್ವಹಣೆಯೊಂದಿಗೆ ಚೇತರಿಸಿಕೊಳ್ಳುತ್ತಾರೆ. ಇದು ಸೋಂಕಿತ ರೋಗಿಯೊಂದಿಗೆ ದೀರ್ಘಕಾಲದ ಮತ್ತು ನಿಕಟ ಸಂಪರ್ಕದ ಮೂಲಕ ಹರಡುತ್ತದೆ. ಜ್ವರ, ದದ್ದು ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳೊಂದಿಗೆ ಮಂಕಿಪಾಕ್ಸ್ ಸೋಂಕಿನ ರೋಗ ಲಕ್ಷಣಗಳು ಕಂಡುಬರುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



