ದೇಶ

ಜಮ್ಮು-ಕಾಶ್ಮೀರ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಲು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಬುಧವಾರ ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಲು ನಾನು ಒತ್ತಾಯಿಸುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವರು ತಮ್ಮ ಹಕ್ಕು ಚಲಾಯಿಸಲು ನಾನು ಕರೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೊದಲ ಹಂತದ ಚುನಾವಣೆಯಲ್ಲಿ ಇಂದು 24 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಇವುಗಳಲ್ಲಿ ಜಮ್ಮು ವಿಭಾಗದಲ್ಲಿ ಎಂಟು ಸ್ಥಾನಗಳು ಮತ್ತು ಕಾಶ್ಮೀರ ವಿಭಾಗದಲ್ಲಿ 16 ಸ್ಥಾನಗಳು ಸೇರಿವೆ, 90 ಸ್ವತಂತ್ರರು ಸೇರಿದಂತೆ 219 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾನ ನಡೆಯುತ್ತಿರುವ ಕ್ಷೇತ್ರಗಳು: ಪಂಪೋರ್, ಟ್ರಾಲ್, ಪುಲ್ವಾಮಾ, ರಾಜ್‌ಪೋರಾ, ಜೈನಾಪೋರಾ, ಶೋಪಿಯಾನ್, ಡಿಹೆಚ್ ಪೋರಾ, ಕುಲ್ಗಾಮ್, ದೇವ್‌ಸರ್, ದೂರು, ಕೋಕರ್‌ನಾಗ್ (ಎಸ್‌ಟಿ), ಅನಂತನಾಗ್ ಪಶ್ಚಿಮ, ಅನಂತನಾಗ್, ಶ್ರೀಗುಫ್ವಾರಾ-ಬಿಜ್‌ಬೆಹರಾ, ಶಾಂಗಸ್-ಅನಂತನಾಗ್ ಪೂರ್ವ, ಪಹಲ್‌ಗಾಗ್ , ಇಂದರ್ವಾಲ್, ಕಿಶ್ತ್ವಾರ್, ಪಾಡರ್-ನಾಗ್ಸೇನಿ, ಭದರ್ವಾ, ದೋಡಾ, ದೋಡಾ ವೆಸ್ಟ್, ರಾಂಬನ್ ಮತ್ತು ಬನಿಹಾಲ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.