'ಎಮರ್ಜೆನ್ಸಿ' ಕುರಿತು ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್; ಬಿಜೆಪಿ ಸಂಸದೆಗೆ ಮತ್ತಷ್ಟು ಸಂಕಷ್ಟ
ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಚಂಡೀಗಢ ಜಿಲ್ಲಾ ನ್ಯಾಯಾಲಯ, ಪ್ರತಿವಾದಿಗಳಿಗೆ ಡಿಸೆಂಬರ್ 5 ರೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿದೆ.

ಚಂಡೀಗಢ: ತಮ್ಮ ಮುಂಬರುವ ಚಿತ್ರ 'ಎಮರ್ಜೆನ್ಸಿ'ಯಲ್ಲಿ ಸಿಖ್ಖರ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಇತರರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಎನ್‌ಜಿಒ ಲಾಯರ್ಸ್ ಫಾರ್ ಹ್ಯುಮಾನಿಟಿ ಅಧ್ಯಕ್ಷರೂ ಆಗಿರುವ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಚಂಡೀಗಢ ಜಿಲ್ಲಾ ನ್ಯಾಯಾಲಯ, ಪ್ರತಿವಾದಿಗಳಿಗೆ ಡಿಸೆಂಬರ್ 5 ರೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿದೆ.
ಕಂಗನಾ ಮತ್ತು ಇತರ ಪ್ರತಿವಾದಿಗಳು 'ಎಮರ್ಜೆನ್ಸಿ' ಚಿತ್ರದಲ್ಲಿ "ಸಿಖ್ಖರ ಪ್ರತಿಷ್ಠೆಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಮತ್ತು ವಿಶೇಷವಾಗಿ ಅಕಾಲ್ ತಕ್ತ್‌ನ ಮಾಜಿ ಜಥೇದಾರ್ ಅವರನ್ನು "ಭಯೋತ್ಪಾದಕ" ಎಂದು ಬಿಂಬಿಸುವ ಮೂಲಕ ಸಮುದಾಯವನ್ನು "ಟಾರ್ಗೆಟ್" ಮಾಡಿದ್ದಾರೆ ಎಂದು ಬಸ್ಸಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
"ಆರೋಪಿಯು ಸರಿಯಾದ ಐತಿಹಾಸಿಕ ಸತ್ಯಗಳನ್ನು ಮತ್ತು ಅಂಕಿಅಂಶಗಳನ್ನು ಅಧ್ಯಯನ ಮಾಡದೆ ಸಿಖ್ಖರನ್ನು ಕೆಟ್ಟದಾಗಿ ಚಿತ್ರಿಸಿದ್ದಾರೆ ಮತ್ತು ಸಿಖ್ ಸಮುದಾಯದ ವಿರುದ್ಧ ತಪ್ಪು ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



