ಸೆ.21ರಂದು ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ; ಕೇಜ್ರಿವಾಲ್ ಸಂಪುಟದ ನಾಲ್ವರಿಗೆ ಸಚಿವ ಸ್ಥಾನ
ಅತಿಶಿ ನೇತೃತ್ವದ ದೆಹಲಿ ಸಚಿವ ಸಂಪುಟಕ್ಕೆ ಆಪ್ ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಕೇಜ್ರಿವಾಲ್ ಸಂಪುಟದ ನಾಲ್ವರು ಸಚಿವರನ್ನು ಉಳಿಸಿಕೊಳ್ಳಲಾಗುವುದು ಎಂದು ಪಕ್ಷ ಗುರುವಾರ ತಿಳಿಸಿದೆ.

ನವದೆಹಲಿ: ಎಎಪಿ ನಾಯಕಿ ಅತಿಶಿ ಅವರು ಸೆಪ್ಟೆಂಬರ್ 21ರಂದು ದೆಹಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ ಐವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅತಿಶಿ ನೇತೃತ್ವದ ದೆಹಲಿ ಸಚಿವ ಸಂಪುಟಕ್ಕೆ ಆಪ್ ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಕೇಜ್ರಿವಾಲ್ ಸಂಪುಟದ ನಾಲ್ವರು ಸಚಿವರನ್ನು ಉಳಿಸಿಕೊಳ್ಳಲಾಗುವುದು ಎಂದು ಪಕ್ಷ ಗುರುವಾರ ತಿಳಿಸಿದೆ.
ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಕೈಲಾಶ್ ಗಹ್ಲೋಟ್ ಮತ್ತು ಇಮ್ರಾನ್ ಹುಸೇನ್ ಅವರು ಅತಿಶಿ ನೇತೃತ್ವದ ಸಂಪುಟದಲ್ಲೂ ಮುಂದುವರಿಯಲಿದ್ದಾರೆ ಎಂದು ಎಎಪಿ ಹೇಳಿದೆ.
ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ದೆಹಲಿಯ ಸುಲ್ತಾನ್ಪುರ ಮಜ್ರಾದ ಶಾಸಕ ಅಹ್ಲಾವತ್ ಅವರನ್ನು ನೇಮಕ ಮಾಡಲಾಗಿದೆ.
ಆನಂದ್ ಅವರು ಕೇಜ್ರಿವಾಲ್ ಸರ್ಕಾರಕ್ಕೆ ರಾಜೀನಾಮೆ ನೀಡಿ, ಕಳೆದ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷವನ್ನು(ಎಎಪಿ) ತೊರೆದಿದ್ದರು.
ದೆಹಲಿ ಸರ್ಕಾರದ ಸಚಿವ ಸಂಪುಟ ಮುಖ್ಯಮಂತ್ರಿ ಸೇರಿದಂತೆ ಏಳು ಸದಸ್ಯರನ್ನು ಹೊಂದಿದೆ. ಏಳನೇ ಸಚಿವರ ಹೆಸರು ಇನ್ನಷ್ಟೇ ಪ್ರಕಟಿಸಬೇಕಿದೆ.
ಮುಂದಿನ ವರ್ಷ ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಹೊಸ ಮುಖ್ಯಮಂತ್ರಿ ಮತ್ತು ಹೊಸ ಸೇರ್ಪಡೆಯ ಅವಧಿಯು ಸಂಕ್ಷಿಪ್ತವಾಗಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



